ಉಡುಪಿ: ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಹಿಡನ್ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಂಬಂಧಪಟ್ಟಂತೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ.
ಎಸ್ ಪಿ ಹೇಳಿದ್ದೇನು?:
ಘಟನೆಗೆ ಸಂಬಂಧಪಟ್ಟಂತೆ ಹಲವಾರು ವಿಡಿಯೋಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಸುದ್ದಿಯಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ನಮಗೂ ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ತಿಳಿಯದೆ ಸುಮ್ಮನೆ ಮಾಹಿತಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.
ಘಟನೆಯ ಬಗ್ಗೆ ಯಾವುದೇ ದೂರು ನೀಡಲಾಗಿಲ್ಲ. ನಾವು ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ.ವಿದ್ಯಾರ್ಥೀನಿಗಳ ಮೊಬೈಲ್ ಪರಿಶೀಲನೆ ಮಾಡಲಾಗಿದೆ, ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು.
ಟ್ವೀಟ್ ವಿಚಾರಕ್ಕೆ ಮಾತನಾಡಿದ ಎಸ್ ಪಿ, ಟ್ವೀಟ್ ಮಾಡಿದವರು ಘಟನೆಯ ಸತ್ಯಾಸತ್ಯತೆಯ ಬಗ್ಗೆ ತಿಳಿದುಕೊಳ್ಳಬೇಕಿತ್ತು. ಅವರನ್ನು ಪೊಲೀಸರು ಸಂಪರ್ಕಿಸಿದ್ದು ಘಟನೆಯ ಮಾಹಿತಿ ನೀಡಲು ಹೊರತು ತೊಂದರೆ ಕೊಡಲು ಅಲ್ಲ ಎಂದರು.
ಸಾರ್ವಜನಿಕರಿಗೆ ಮನವಿ: ಜನರಿಗೆ ಮನವಿ ಮಾಡುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ವಿಚಾರಗಳನ್ನು ಈ ವಿಷಯಕ್ಕೆ ಲಿಂಕ್ ಮಾಡಿ ಜನರ ಮನಸ್ಸಿನಲ್ಲಿ ಆತಂಕ ಸೃಷ್ಟಿ ಮಾಡುವ ಅಥವಾ ಗೊಂದಲವುಂಟು ಮಾಡುವ ಪೋಸ್ಟ್ ಹಾಕಬೇಡಿ. ಏನಾದರೂ ಖಚಿತ ಮಾಹಿತಿ ಸಿಕ್ಕಿದರೆ ಶೇರ್ ಮಾಡುವ ಮೊದಲು ನಮಗೆ ತಿಳಿಸಿ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ವದಂತಿ ಹರಡಬೇಡಿ ಎಂದು ಎಸ್ ಪಿ ಮನವಿ ಮಾಡಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್