ದೋಹಾ : ದಿನಾಂಕ 10-08-2023 ರಂದು ಹೃಸ್ವ ಸಂದರ್ಶನಕ್ಕಾಗಿ ಖತ್ತರ್ ಗೆ ಭೇಟಿ ನೀಡಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಪಿ.ಎಮ್. ಹಮೀದ್ ಈಶ್ವರಮಂಗಳ ರವರಿಗೆ ಖತ್ತರ್ ಕೆಸಿಎಫ್ ವತಿಯಿಂದ ದೋಹಾದಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ಖತ್ತರ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪಿಎಮ್ ಹಮೀದ್ ಈಶ್ವರಮಂಗಳ ರವರನ್ನು ಕೆಸಿಎಫ್ ರಾಷ್ಟ್ರೀಯ ನಾಯಕರು ಬರಮಾಡಿಕೊಂಡು, ತದನಂತರ ಕೆಸಿಎಫ್ ನಾಯಕರೂ ಹಾಗೂ ಅಂತರಾಷ್ಟ್ರೀಯ ಸಮಿತಿ ಅಡ್ಮಿನ್ ವಿಭಾಗ ಅಧ್ಯಕ್ಷರಾದ ಕಬೀರ್ ದೇರಳಕಟ್ಟೆಯವರ ನಿವಾಸದಲ್ಲಿ ಭವ್ಯ ಸ್ವಾಗತ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಸಿಎಫ್ ಸಂಘಟನೆಯ ಕಾರ್ಯಾಚರಣೆ ಹಾಗೂ ರೂಪುರೇಷೆಗಳ ಬಗ್ಗೆ ನೆರೆದಿದ್ದ ಸದಸ್ಯರೊಂದಿಗೆ ಚರ್ಚೆ ನಡೆಸಿದರು.ಅತಿಥಿ ಸತ್ಕಾರದ ಭಾಗವಾಗಿ, ಕೆಸಿಎಫ್ ಖತ್ತರ್ ರಾಷ್ರ್ಟೀಯ ಸಮಿತಿ ವತಿಯಿಂದ ಗಣ್ಯ ಅತಿಥಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಅಂತರಾಷ್ಟ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಹಾಫಿಳ್ ಉಮರುಲ್ ಫಾರೂಖ್ ಸಖಾಫಿ ಕೊಡಗು, ರಾಷ್ಟ್ರೀಯ ಅಧ್ಯಕ್ಷರಾದ ಮೊಹಮ್ಮದ್ ಹನೀಫ್ ಪಾತೂರು, ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ, ಫೈನಾನ್ಸ್ ಕಂಟ್ರೋಲರ್ ಮುನೀರ್ ಮಾಗುಂಡಿ,ಸಂಘಟನಾ ವಿಭಾಗ ಅಧ್ಯಕ್ಷ ಮಿರ್ಶಾದ್ ಕನ್ಯಾನ, ಅಡ್ಮಿನ್ ವಿಭಾಗ ಅಧ್ಯಕ್ಷ ಸತ್ತಾರ್ ಅಶ್ರಫಿ ಮಠ ಹಾಗೂ ಕಾರ್ಯದರ್ಶಿ ಹಕೀಂ ಪಾತೂರು ರವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ