ಜಿದ್ದಾ : ಸೌದಿ ಅರೇಬಿಯಾದಲ್ಲಿ ಕೆಲಸದ ಪರವಾನಗಿ ಇಲ್ಲದೆ ಅಥವಾ ಅಜೀರ್ ಕಾರ್ಯಕ್ರಮದಲ್ಲಿ ನೋಂದಣಿ ಮಾಡದೆ ವಿದೇಶಿಯರನ್ನು ನೇಮಿಸಿಕೊಳ್ಳುವುದು ಕಾನೂನಿನ ಗಂಭೀರ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ.
ಇಂತಹ ಅಪರಾಧಗಳಿಗಾಗಿ ಉದ್ಯೋಗದಾತರಿಗೆ 10,000 ರಿಯಾಲ್‌ಗಳವರೆಗೆ ದಂಡ ವಿಧಿಸಲಾಗುವುದು ಎಂದು ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ ಪ್ರಕಟಿಸಿದೆ. ನಿನ್ನೆ ಬಿಡುಗಡೆಯಾದ ಪರಿಷ್ಕೃತ ಕಾರ್ಮಿಕ ಕಾನೂನು ಉಲ್ಲಂಘನೆ ಮತ್ತು ದಂಡದ ಅಂತಿಮ ಕರಡಿನಲ್ಲಿ ಇದನ್ನು ಹೇಳಲಾಗಿದೆ.
ಪರಿಷ್ಕೃತ ಕಾಯಿದೆಯ ಪ್ರಕಾರ, ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾನೂನುಗಳನ್ನು ಅನುಸರಿಸದಿರುವುದು ಮತ್ತು ಕಾರ್ಮಿಕರನ್ನು ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾದರೆ ಗಂಭೀರ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಇದಕ್ಕಾಗಿ 1500 ರಿಂದ 5000 ರಿಯಾಲ್‌ಗಳವರೆಗೆ ದಂಡವನ್ನು ವಿಧಿಸಲಾಗುತ್ತದೆ.
ಸಂಸ್ಥೆಯ ಪರಿಸರದಲ್ಲಿರುವವರಿಗೆ ಉಂಟಾಗುವ ಅಪಘಾತಗಳಿಗೆ ಉದ್ಯೋಗದಾತರೇ ಜವಾಬ್ದಾರರಾಗಿರುತ್ತಾರೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. 50 ಅಥವಾ ಅದಕ್ಕಿಂತ ಹೆಚ್ಚು ಕೆಲಸಗಾರರನ್ನು ನೇಮಿಸುವ ಸಂಸ್ಥೆಯಲ್ಲಿ ಮಕ್ಕಳ ಆರೈಕೆಗಾಗಿ ವಿಶೇಷ ಸ್ಥಳ ಅಥವಾ ನರ್ಸರಿ ಇಲ್ಲದಿದ್ದರೂ 5000 ರಿಯಾಲ್‌ಗಳ ದಂಡವನ್ನು ವಿಧಿಸಲಾಗುತ್ತದೆ.
ಆದರೆ ಈ ನಿಯಮವು ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಹತ್ತು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಸಂಸ್ಥೆಗೆ ಮಾತ್ರ ಅನ್ವಯಿಸುತ್ತದೆ. ಉದ್ಯೋಗಿ ಅಥವಾ ಕುಟುಂಬದ ಸದಸ್ಯರ ಪಾಸ್‌ಪೋರ್ಟ್ ಅಥವಾ ಇಖಾಮಾವನ್ನು ಇಟ್ಟುಕೊಂಡಿರುವ ಉದ್ಯೋಗದಾತರಿಗೆ 1000 ರಿಯಾಲ್ ದಂಡ ವಿಧಿಸಲಾಗುವುದು ಎಂದು ಪರಿಷ್ಕೃತ ನಿಯಮಗಳು ವಿವರಿಸುತ್ತವೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ