janadhvani

Kannada Online News Paper

ಬೆದರಿಕೆ ಭಾಷಣ: ಮೋದಿ ವಿರುದ್ದ ರಾಷ್ಟ್ರಪತಿಗೆ ಪತ್ರ

ನವದೆಹಲಿ: ಹುಬ್ಬಳ್ಳಿಯಲ್ಲಿ ಮೇ 06ರಂದು ನಡೆದ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಡಿದ್ದ ಭಾಷಣವನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರಾದ ಮನಮೋಹನ್‌ ಸಿಂಗ್‌ ಸೇರಿದಂತೆ ಇತರೆ ನಾಯಕರು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ ‘ಕಾಂಗ್ರೆಸ್‌ ನಾಯಕರೇ ನೀವು ನಿಮ್ಮ ಎಲ್ಲೆ ಮೀರಿದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ’ ಎಂದು ವಾಗ್ದಾಳಿ ನಡೆಸಿದ್ದರು.

ಕಾಂಗ್ರೆಸ್‌ ಪಕ್ಷ ಸೇರಿದಂತೆ ಯಾವುದೇ ಪಕ್ಷ ಮತ್ತು ವ್ಯಕ್ತಿಗೆ ಬೆದರಿಕೆ ಒಡ್ಡುವಂತಹ ಪದಗಳ ಬಳಕೆ ಕುರಿತು ಎಚ್ಚರಿಕೆ ವಹಿಸುವಂತೆ ಪ್ರಧಾನಿಗೆ ಸೂಚಿಸುವಂತೆ ರಾಷ್ಟ್ರಪತಿಗಳಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್‌ ನಾಯಕರಾದ ಪಿ.ಚಿದಂಬರಂ, ಆನಂದ ಶರ್ಮಾ, ಕರಣ್‌ ಸಿಂಗ್‌ ಸೇರಿದಂತೆ ಇತರರು ಪತ್ರಕ್ಕೆ ಸಹಿ ಹಾಕಿದ್ದಾರೆ.

‘ಪ್ರಧಾನಿ ಹುದ್ದೆಯಲ್ಲಿರುವವರು ಬೆದರಿಕೆ ಹಾಕುವಂತಹ ಪದಗಳನ್ನು ಬಳಸುವುದು ಸರಿಯಲ್ಲ. ಜತೆಗೆ, ಸಾವರ್ಜನಿಕವಾಗಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನು ನಮ್ಮ ಪಕ್ಷ ಖಂಡಿಸುತ್ತದೆ. ಪ್ರಧಾನಿ ಮೋದಿ ಅವರ ಬೆದರಿಕೆಗೆ ಕಾಂಗ್ರೆಸ್‌ ನಾಯಕರಾಗಲೀ ಅಥವಾ ಪಕ್ಷವಾಗಲೀ ಎದುರುವುದಿಲ್ಲ’ ಎಂದು ಮನಮೋಹನ್‌ ಸಿಂಗ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

error: Content is protected !! Not allowed copy content from janadhvani.com