ಅಬುದಾಬಿ:- ಸೆಪ್ಟಂಬರ್ 10ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ನಡೆಯಲಿರುವ ಎಸ್ಎಸ್ಎಫ್ (ಸುನ್ನೀ ಸ್ಟೂಡೆಂಟ್ ಫೆಡರೇಶನ್) ಇದರ 50ನೇ ವರ್ಷಾಚರಣೆಯ ಭಾಗವಾಗಿ ನಡೆಯುವ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನದ ಪ್ರಚಾರಾರ್ಥವಾಗಿ ಅಬುಧಾಬಿ ಕೆಸಿಎಫ್ ಹಮ್ಮಿಕೊಂಡ G-Meet ಎಂಬ ಕಾರ್ಯಕ್ರಮದ ವೇದಿಕೆಯಲ್ಲಿ ಜೀವನದ ಬಹುದೊಡ್ಡ ಭಾಗವನ್ನು ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಉನ್ನತಿಗಾಗಿ ಮುಡಿಪಾಗಿಟ್ಟು ಭಾರತದ ಗ್ರಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ರವರ ನಿರ್ದೇಶನದಂತೆ ತಮ್ಮ ಜೀವನವನ್ನು ಬಾಲ್ಯದಿಂದಲೇ ಸಮುದಾಯಕ್ಕಾಗಿ ಎಸ್ಎಸ್ಎಫ್ ಮೂಲಕ ಧಾರೆಯೆರೆದ ಹಿರಿಯರು, ಅಬುದಾಬಿ ಅನಿವಾಸಿಗಳು ಆದ ಬಹು ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಲ ಹಾಗೂ ಪಿಎಂ ಅಬ್ದುಲ್ ಹಮೀದ್ ರವರಿಗೆ ಕೆಸಿಎಫ್ ಅಬುಧಾಬಿ ವತಿಯಿಂದ ಗೌರವ ಸಮರ್ಪಿಸಲಾಯಿತು.
ಈ ಸಮಯದಲ್ಲಿ ಕೆಸಿಎಫ್ ಯುಎಇ ರಾಷ್ಟ್ರೀಯ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಕೆದುಂಬಾಡಿ, ಎಸ್ಎಸ್ಎಫ್ ಕರ್ನಾಟಕ ರಾಜ್ಯಾಧ್ಯಾಕ್ಷರಾದ ಬಹು ಸುಫಿಯಾನ್ ಸಖಾಫಿ ಹಾಗೂ ಕೆಸಿಎಫ್ ರಾಷ್ಟ್ರೀಯ ನೇತಾರರಾದ ಹಕಿಂ ತುರ್ಕಳಿಕೆ, ಕೆ.ಎಚ್.ಸಖಾಫಿ, ಕೆಸಿಎಫ್ ಅಬುಧಾಬಿ ಸಮಿತಿ ಅಧ್ಯಕ್ಷರಾದ ಹಸೈನಾರ್ ಅಮಾನಿ, ಪ್ರಧಾನ ಕಾರ್ಯದರ್ಶಿ ಕಬೀರ್ ಬಾಯಂಬಾಡಿ ಹಾಗೂ ಇನ್ನಿತರರು ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ