ಸುಂಟಿಕೊಪ್ಪ : SSF ಕೊಡಗು ಜಿಲ್ಲಾ ಸಮಿತಿ ವತಿಯಿಂದ 77-ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸುಂಟಿಕೊಪ್ಪ ಪಟ್ಟಣದಲ್ಲಿ ಬ್ರಹತ್ ಆಝಾದಿ ರ‍್ಯಾಲಿ ನಡೆಸಲಾಯಿತು.
ಕೂರ್ಗ್ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯದ್ ಶಿಹಾಬುದ್ದೀನ್ ಕಿಲ್ಲೂರು ತಂಙ್ಙಳ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಭಾಷಣಕಾರರಾಗಿ SYS ರಾಜ್ಯ ನಾಯಕರಾದ ಅಹ್ಮದ್ ಶರೀಫ್ ಸಖಾಫಿ ಕಿಲ್ಲೂರು ರವರು ಭಾರತದಲ್ಲಿರುವ ಭಾವೈಕ್ಯತೆಯ ಕುರಿತು ಆಳವಾಗಿ ವಿವರಿಸಿ ಸೆಪ್ಟೆಂಬರ್ 10ರಂದು ಬೆಂಗಳೂರಿನಲ್ಲಿ ನಡೆಯುವ SSF ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸಲು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾll ಮಂತರ್ ಗೌಡ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಕಾಂಗ್ರೆಸ್ ನಾಯಕರಾದ ವಿ.ಪಿ ಶಶಿದರ್ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಲತೀಫ್ ಸುಂಟಿಕೊಪ್ಪ ಮಾತನಾಡಿದರು.
ಜಿಲ್ಲಾಧ್ಯಕ್ಷರಾದ ಝುಬೈರ್ ಸಅದಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಹ್ಸನಿ ಉಸ್ತಾದ್,SYS ರಾಜ್ಯಾದ್ಯಕ್ಷರಾದ ಹಫೀಲ್ ಸಅದಿ, ಮಾಜಿ ರಾಜ್ಯಾಧ್ಯಕ್ಷರಾದ ಇಸ್ಮಾಯಿಲ್ ಸಖಾಫಿ ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ, SJM ಜಿಲ್ಲಾಧ್ಯಕ್ಷರಾದ ಮುಸ್ತಫಾ ಸಖಾಫಿ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಖಾಫಿ, SYS ಜಿಲ್ಲಾಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ SSF ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಯಾಕೂಬ್ ಮಾಷ್ಟರ್, ಶರೀಫ್ ಮಾಷ್ಟರ್ ಕೊಡಗು ಮಾಜಿ ಜಿಲ್ಲಾದ್ಯಕ್ಷರಾದ ಶಾಫಿ ಸಅದಿ ಉಪಸ್ಥಿತರಿದ್ದರು.
ಗದ್ದೇಹಳ ಸರ್ಕಳ್ ನಿಂದ ಪ್ರಾರಂಭಗೊಂಡ ಬೃಹತ್ ಆಝಾದಿ ಸಂದೇಶ ಜಾಥಾ ಸುಂಟಿಕೊಪ್ಪ ಪಟ್ಟಣದ ವಾಹನ ಚಾಲಕರ ಹಾಗು ಮಾಲಿಕರ ಸಂಘ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುನೈದ್ ಅಮ್ಮತ್ತಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ‍್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್