janadhvani

Kannada Online News Paper

ರಾಜ್ಯದಲ್ಲಿ ಇವಿಎಮ್ ಅಲೆ, ಪ್ರಜಾಪ್ರಭುತ್ವದ ಕಗ್ಗೊಲೆ -ತಕರಾರು ಅರ್ಜಿ ಸಲ್ಲಿಸಲು ಸಿದ್ಧತೆ

ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶಗಳು ಇದೀಗಾಗಲೇ ಹೊರ ಬರುತ್ತಿದ್ದು ಕಾಂಗ್ರೆಸ್ ಸೋಲುಂಡು ಕಮಲ ಅರಳುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಏಳು ಕ್ಷೇತ್ರಗಳ ಫಲಿತಾಂಶ ಪ್ರಶ್ನಿಸಿ ‌ಚುನಾವಣಾ ಅಧಿಕಾರಿಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಪಕ್ಷದ ಚುನಾವಣಾ ಏಜೆಂಟರು ತಕರಾರು ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದ್ದಾರೆ.

ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ಮತ್ತು ಮೂಡುಬಿದಿರೆ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲಿದ್ದಾರೆ.

ವಿದ್ಯುನ್ಮಾನ ಮತಯಂತ್ರಗಳ ಮೇಲೆ ಶಂಕೆ‌ ವ್ಯಕ್ತಪಡಿಸಿ ದೂರು ಸಲ್ಲಿಸಿದ್ದಾರೆ. ಬುಧವಾರ ಬೆಳಿಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಅವರಿಗೆ ವಿಸ್ತೃತ ತಕರಾರು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

error: Content is protected !! Not allowed copy content from janadhvani.com