ಬಂಟ್ವಾಳ : ಪುದು, ತುಂಬೆ ಮತ್ತು ಅಡ್ಯಾರ್ ಈ ಮೂರು ಗ್ರಾಮಗಳ 20 ಜಮಾಅತ್ ಹಾಗೂ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಇದರ ಜಂಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆಯ ವಿರುದ್ಧ ಜನಜಾಗೃತಿ ಮೂಡಿಸಲು ಸೆಪ್ಟೆಂಬರ್ 08 ಶುಕ್ರವಾರ ಮಧ್ಯಾಹ್ನ 02:30 ಗಂಟೆಗೆ ಫರಂಗಿಪೇಟೆಯ ಜಂಕ್ಷನ್ ನಲ್ಲಿ “ಡ್ರಗ್ಸ್ ಮುಕ್ತ ಗ್ರಾಮ ಜನಜಾಗೃತಿ ಅಭಿಯಾನ” ವನ್ನು ಏರ್ಪಡಿಸಲಾಗಿದೆ.
ಜಾಗೃತಿ ಕಾರ್ಯಕ್ರಮದಲ್ಲಿ ಶಾಲಾ/ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ, ಹಲವು ಸಂಘ ಸಂಸ್ಥೆಗಳ ನೇತೃತ್ವದಲ್ಲಿ ವಾಹನ ಜಾಥಾ, ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಬೃಹತ್ ಜಾಗೃತಿಸಭೆಯನ್ನು ಆಯೋಜಿಸಲಾಗಿದೆ.
ಇದೇ ಸಂದರ್ಭದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರಿಂದ ಜಾಗೃತಿ ಸಂದೇಶ, ವೈದ್ಯಕೀಯ ತಜ್ಞರು ಹಾಗೂ ಪೊಲೀಸ್ ಇಲಾಖೆಯ ವರಿಷ್ಠರಿಂದ ಸಂವಾದ ಕಾರ್ಯಕ್ರಮ ನಡೆಯಲಿರುತ್ತದೆ.
ಈ ಮೂರು ಗ್ರಾಮಕ್ಕೆ ಒಳಪಟ್ಟ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್