janadhvani

Kannada Online News Paper

ಬಿಜೆಪಿ-ಜೆಡಿಎಸ್ ಮೈತ್ರಿಗೆ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ- ಬಿ ಎಸ್ ಯಡಿಯೂರಪ್ಪ

ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ- ಬಿ ಎಸ್ ವೈ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ ಆದಂತಾಗಿದೆ, ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಈ ವಿಷಯವನ್ನು ಬಹಿರಂಗವಾಗಿ ಒಪ್ಪಿಕೊಂಡಿರುವ ಬಿಎಸ್ ವೈ, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ, ಅಮಿತ್ ಶಾ ಅವರು 4 ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಒಪ್ಪಿಕೊಂಡಿದ್ದಾರೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ ಎಂದಿದ್ದಾರೆ.

ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದಿದ್ದಾರೆ.

ನಾವು ಒಗ್ಗಟ್ಟಾಗಿ ರಾಜ್ಯ ಸರ್ಕಾರ ವಿರುದ್ಧ ಹೋರಾಡುತ್ತೇವೆ ಎಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

error: Content is protected !! Not allowed copy content from janadhvani.com