ಬೆಂಗಳೂರು: ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ರವಿವಾರ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯ ಸುನ್ನಿ ಸ್ಪೂಡೆಂಟ್ ಫೆಡರೇಷನ್(ಎಸ್ಸೆಸ್ಸೆಫ್) 50ನೆ ವರ್ಷಾಚರಣೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಅವರು, ಇಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಜೊತೆಗೆ ಮುಖ್ಯಮಂತ್ರಿಗಳನ್ನು ಭೇಟಿಯಾದರು.
ಅವರು, ಕರ್ನಾಟಕದಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಂತರ್ಗತ ಅಭಿವೃದ್ಧಿ, ಸರ್ವಧರ್ಮ ಸಮನ್ವಯ ಮತ್ತು ಮೂಲಭೂತ ಹಕ್ಕುಗಳ ಮುಕ್ತ ಅಭ್ಯಾಸಕ್ಕೆ ಸಂಬಂಧಿಸಿದ ಅಗತ್ಯ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜತೆ ರಚನಾತ್ಮಕ ಸಂವಾದ ನಡೆಸಿದರು.
ನಮ್ಮ ಸಂವಿಧಾನವು ನೀಡಿರುವ ಮೂಲಭೂತ ಹಕ್ಕುಗಳ ಸಂಪೂರ್ಣ ಶ್ರೇಣಿಯನ್ನು ಮುಕ್ತವಾಗಿ ಆನಂದಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದರೊಂದಿಗೆ, ಶಿಕ್ಷಣ ಮತ್ತು ಸಾಮಾಜಿಕ ಅಭಿವೃದ್ಧಿಯ ಮೂಲಕ ಅಲ್ಪಸಂಖ್ಯಾತ ಸಮುದಾಯಗಳನ್ನು ಸಬಲೀಕರಣಗೊಳಿಸಲು ಸಮಗ್ರ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್, ರಾಜ್ಯ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಮೌಲಾನ ಶಾಫಿ ಸಅದಿ,ಖುರ್ರತ್ತುಸ್ಸಾದಾತ್ ಸಯ್ಯಿದ್ ಫಝಲ್ ಅಲ್ ಬುಖಾರಿ ಕೂರತ್, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಹಾಫಿಝ್ ಸುಫಿಯಾನ್ ಸಖಾಫಿ ಮುಂತಾದವರು ಉಪಸ್ಥಿತರಿದ್ದರು.