ರಿಯಾದ್: ಸೌದಿ ಅರೇಬಿಯಾದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರವಾದಿಯವರನ್ನು ನಿಂದಿಸಿದ ಯುವತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಮಹಿಳೆ ಎಕ್ಸ್ ಪ್ಲಾಟ್‌ಫಾರ್ಮ್ ಮೂಲಕ ಪ್ರವಾದಿಯವರನ್ನು ಪದೇ ಪದೇ ದೂಷಿಸುತ್ತಿದ್ದಳು.
ಘಟನೆಗೆ ಸಂಬಂಧಿಸಿದಂತೆ, ಮಾಧ್ಯಮ ನಿಯಂತ್ರಣ ಪ್ರಾಧಿಕಾರವು ಮಹಿಳೆಯನ್ನು ವಿಚಾರಣೆಗೆ ಕರೆದಿದೆ. ತನಿಖೆಯನ್ನು ಪೂರ್ಣಗೊಳಿಸಿ ಮಹಿಳೆ ವಿರುದ್ಧದ ಪ್ರಕರಣವನ್ನು ಪಬ್ಲಿಕ್ ಪ್ರಾಸಿಕ್ಯೂಷನ್‌ಗೆ ಹಸ್ತಾಂತರಿಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.
ಮಹಿಳೆ ಎಕ್ಸ್ ಪ್ಲಾಟ್‌ಫಾರ್ಮ್ ಮೂಲಕ ಪ್ರವಾದಿ ಮತ್ತು ಪ್ರವಾದಿ ಪತ್ನಿ ಖದೀಜಾರನ್ನು ದೂಷಿಸುವ ಸಂದೇಶಗಳು ಮತ್ತು ವೀಡಿಯೊಗಳನ್ನು ಹರಡಿದ್ದಳು. ಸೌದಿ ಅರೇಬಿಯಾದಲ್ಲಿ ಪ್ರವಾದಿ ನಿಂದನೆಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 30 ಲಕ್ಷ ರಿಯಾಲ್ ದಂಡ ವಿಧಿಸಲಾಗುತ್ತದೆ.