ದೆಹಲಿ: ಗಲ್ಫ್‌ಗೆ ತೆರಳುವ ವಿಮಾನ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ಕೇರಳ ಅನಿವಾಸಿ ಅಸೋಸಿಯೇಷನ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ವಿಮಾನಯಾನ ಸಂಸ್ಥೆಗಳನ್ನು ನಿಯಂತ್ರಿಸಲು ಮತ್ತು ವಿಮಾನ ದರಕ್ಕೆ ಮಿತಿ ನಿಗದಿಪಡಿಸಬೇಕು ಎಂಬುದು ಅರ್ಜಿಯಲ್ಲಿನ ಬೇಡಿಕೆಯಾಗಿದೆ. ಭಾರತೀಯ ವಿಮಾನಯಾನ ಕಾಯ್ದೆಯ ನಿಯಮ-135 ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ, ಇದು ಟಿಕೆಟ್ ದರವನ್ನು ನಿಗದಿಪಡಿಸಲು ವಿಮಾನಯಾನ ಸಂಸ್ಥೆಗಳಿಗೆ ಅಧಿಕಾರ ನೀಡುತ್ತದೆ.
ಈ ನಿಯಮಗಳು ಅಸಂವಿಧಾನಿಕ ಮತ್ತು ನಾಗರಿಕರ ಪ್ರಯಾಣದ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಗಲ್ಫ್ ಪ್ರಯಾಣಿಕರನ್ನು ಲೂಟಿ ಮಾಡುತ್ತಿರುವ ವಿಮಾನಯಾನ ಸಂಸ್ಥೆಗಳಿಗೆ ಕಡಿವಾಣ ಹಾಕಲು ಸರ್ಕಾರ ಸಿದ್ಧವಿಲ್ಲದ ಕಾರಣ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ಕೇರಳ ಅನಿವಾಸಿ ಸಂಘ ತಿಳಿಸಿದೆ.
ನಿಯಮ 134 ರ ಉಪ-ನಿಯಮಗಳು (1) ಮತ್ತು (2) ರ ಪ್ರಕಾರ ಕಾರ್ಯನಿರ್ವಹಿಸುವ ಪ್ರತಿಯೊಂದು ವಾಯು ಸಾರಿಗೆ ಸಂಸ್ಥೆಯು ಕಾರ್ಯಾಚರಣೆಯ ವೆಚ್ಚ ಮತ್ತು ಸೇವೆಯ ಗುಣಲಕ್ಷಣಗಳನ್ನು ಒಳಗೊಂಡಂತೆ ಎಲ್ಲಾ ಅಂಶಗಳನ್ನು ಪರಿಗಣಿಸಿ ದರವನ್ನು ಸ್ಥಾಪಿಸುತ್ತದೆ.
ಆದರೆ, ದರ ನಿಗದಿಗೆ ಸಂಬಂಧಿಸಿದಂತೆ ಯಾವುದೇ ಮಾರ್ಗಸೂಚಿಗಳು ಅಥವಾ ಸ್ಪಷ್ಟತೆ ಇಲ್ಲದಿರುವುದರಿಂದ ಈ ಕಾಯಿದೆಯಡಿ ದರವನ್ನು ನಿಗದಿಪಡಿಸಲು ವಿಮಾನಯಾನ ಸಂಸ್ಥೆಗೆ ಅನಿಯಂತ್ರಿತ ಅಧಿಕಾರ ನೀಡಲಾಗಿದೆ ಎಂದು ಅರ್ಜಿಯಲ್ಲಿ ಸೂಚಿಸಲಾಗಿದೆ.
ಗಲ್ಫ್ ದೇಶಗಳಲ್ಲಿನ ಬೇಸಿಗೆ ರಜೆಯ ಅವಧಿಯಾದ ಜೂನ್ ನಿಂದ ಸೆಪ್ಟೆಂಬರ್ ತಿಂಗಳವರೆಗೆ ವಿಮಾನ ದರವು ಗಗನಕ್ಕೇರುತ್ತಿದೆ.ವಿಮಾನದ ಇಂಧನದ ಬೆಲೆಯು ಹೆಚ್ಚಾದ ಕಾರಣದಿಂದ ವಿಮಾನಯಾನ ದರ ಹೆಚ್ಚಾಗಿದೆ ಎಂದು ಸಂಸ್ಥೆಗಳು ಹೇಳುತ್ತವೆ
ಕೇರಳ ಅನಿವಾಸಿ ಅಸೋಸಿಯೇಷನ್ ವಿಮಾನಯಾನ ಕಂಪನಿಗಳ ಕ್ರಮದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಕೂಡ ಅರ್ಜಿ ಸಲ್ಲಿಸಿತ್ತು. ಆದರೆ ನ್ಯಾಯಾಲಯ ಮಧ್ಯಪ್ರವೇಶಿಸಲಿಲ್ಲ. ಈ ವಿಚಾರದಲ್ಲಿ ಸರ್ಕಾರದ ಮಧ್ಯಪ್ರವೇಶವಿಲ್ಲದ ಪರಿಸ್ಥಿತಿಯಲ್ಲಿ ಸಂಘವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಸಂಘದ ಪರವಾಗಿ ಚೇರ್ಮ್ಯಾನ್ ರಾಜೇಂದ್ರನ್ ವೆಲ್ಲಪಾಲತ್ ಮತ್ತು ಅಧ್ಯಕ್ಷೆ ಅಶ್ವನಿ ನಂಬಾರಂಬತ್ ಅರ್ಜಿದಾರರಾಗಿದ್ದು, ವಕೀಲರಾದ ಶ್ಯಾಮ್ ಮೋಹನ್ ಮತ್ತು ಕುರಿಯಾಕೋಸ್ ವರ್ಗೀಸ್ ಅವರು ಅರ್ಜಿ ಸಲ್ಲಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್