janadhvani

Kannada Online News Paper

ಕಾಂಗ್ರೆಸ್‌ ಮತ್ತು ಜೆಡಿಎಸ್‌ ನ ತಲಾ ಹತ್ತು ಶಾಸಕರಿಗೆ ಮಾತ್ರ ರಾಜ್ಯಪಾಲರ ಭೇಟಿಗೆ ಅವಕಾಶ-ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ರಾಜಭವನ ತಲುಪಿದ್ದು, ಸರ್ಕಾರ ರಚನೆಗೆ ರಾಜ್ಯಪಾಲರ ಮುಂದೆ ಅವಕಾಶ ಕೋರಲಿದ್ದಾರೆ.

ರಾಜ್ಯಪಾಲ ವಜುಬಾಯಿ ವಾಲಾ ಅವರು ಶಾಸಕರ ಭೇಟಿಗೆ 5:00ಕ್ಕೆ ಸಮಯ ನೀಡಿದ್ದರು. ಸಮಯಕ್ಕೂ ಮುನ್ನವೇ ರಾಜಭವನ ಬಳಿ ತಲುಪಿದ ಎಚ್‌.ಡಿ.ಕುಮಾರಸ್ವಾಮಿ ಅವರ ಪ್ರವೇಶಕ್ಕೆ ಪೊಲೀಸರು ಅವಕಾಶ ನೀಡದೆ, ಪ್ರವೇಶ ದ್ವಾರದಲ್ಲಿಯೇ ತಡೆದರು.ಎಲ್ಲ ಶಾಸಕರಿಗೂ ಭೇಟಿ ಅನುಮತಿ ನಿರಾಕರಿಸಿರುವ ರಾಜ್ಯಪಾಲರು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ತಲಾ ಹತ್ತು ಶಾಸಕರಿಗೆ ಮಾತ್ರ ಅವಕಾಶ ನೀಡಿದ್ದಾರೆ. ರಾಜಭವನದೊಳಗೆ ಎಲ್ಲ ಶಾಸಕರಿಗೂ ಪ್ರವೇಶ ನಿರಾಕರಿಸಿದ್ದನ್ನು ವಿರೋಧಿಸಿ ಪ್ರತಿಭಟನೆಯೂ ನಡೆಯಿತು.

ಕಾಂಗ್ರೆಸ್‌ನ ಜಿ.ಪರಮೇಶ್ವರ ಮತ್ತು ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು ರಾಜ್ಯಪಾಲರ ಭೇಟಿ ಮಾಡಲಿದ್ದಾರೆ.

error: Content is protected !! Not allowed copy content from janadhvani.com