ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಕಾಜೂರ್ ದರ್ಗಾ ಶರಿಫ್ ಆಡಳಿತ ಸಮಿತಿಯ ವತಿಯಿಂದ ಪವಿತ್ರ ರಬೀವುಲ್ ಅವ್ವಲ್ ತಿಂಗಳಲ್ಲಿ ಉಮ್ರಾ ಯಾತ್ರೆ ಹೊರಟಿರುವವರಿಗೆ ಬೀಳ್ಕೊಡಿಗೆ ಕಾರ್ಯಕ್ರಮವು ಕಾಜೂರ್ ದರ್ಗಾ ವಠಾರದಲ್ಲಿ ನಡೆಯಿತು.

ದರ್ಗಾ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದ ಸಭೆಯನ್ನು ಕಾಜೂರ್ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರ್ ಪ್ರಾರ್ಥನೆಗೆ ನೇತೃತ್ವ ನೀಡಿದರು.ಮುದರ್ರಿಸ್ ತೌಸೀಫ್ ಸಅದಿ ಹರೇಕಳ ಸಭೆಯನ್ನು ಉದ್ಘಾಟಿಸಿದರು. . ಕೆ.ಎಂ ಸಿದ್ದೀಕ್ ಮೋಂಟುಗೋಳಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಮ್ರಾ ಯಾತ್ರೆ ಹೊರಟಿರುವ ಸಂಸ್ಥೆಯ ಪ್ರದಾನ ಕಾರ್ಯದರ್ಶಿ, ಜಿಲ್ಲಾ ವಕ್ಫ್ ಮಂಡಳಿ ಸದಸ್ಯರೂ ಆದ ಅಬೂಬಕ್ಕರ್ ಸಿದ್ದಿಕ್ ಜೆ.ಎಚ್, ಹಾಗೂ ಅವರ ತಂದೆ ಜೆ.ಎಚ್. ಅಬ್ಬಾಸ್, ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಅಷ್ಫಾಕ್ ಹಾಗೂ ಅವರ ತಂದೆ ಕೆ.ಯು ಮಹಮ್ಮದ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದರ್ಗಾ ಆಡಳಿತ ಸಮಿತಿ ಪದಾಧಿಕಾರಿಗಳು ಸದಸ್ಯರುಗಳು, ಅಧೀನ ಸಂಸ್ಥೆಯ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳು ಊರಿನ ಗಣ್ಯರು ಸಹಿತ ಹಲವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ