ಜೆಡ್ಡಾ: ಸೌದಿ ಅರೇಬಿಯಾದ ಜಿದ್ದಾದಲ್ಲಿ ವ್ಯಾಪಾರ ಕೇಂದ್ರಗಳಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಜಿದ್ದಾದ ಸುಲೈಮಾನಿಯಾ ಜಿಲ್ಲೆಯಲ್ಲಿ ಕೆಲವು ವ್ಯಾಪಾರ ಕೇಂದ್ರಗಳು ಬೆಂಕಿಗಾಹುತಿಯಾಗಿದೆ.
ಕಾರ್ಪೆಟ್ ಸೇರಿದಂತೆ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ನಾಗರಿಕ ರಕ್ಷಣಾ ದಳದವರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಸಿವಿಲ್ ಡಿಫೆನ್ಸ್ ತಿಳಿಸಿದೆ.