ಮಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ದ. ಕ ಜಿಲ್ಲೆ ವೆಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರವಾದಿ ಮುಹಮ್ಮದ್ ಸ ರವರ ಜನ್ಮ ದಿನಾಚರಣೆ ಅಂಗವಾಗಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಇಲಲ್ ಹಬೀಬ್ ಬೃಹತ್ ಮೀಲಾದ್ ರ‍್ಯಾಲಿಯು ಇದೇ ಬರುವ ಅಕ್ಟೋಬರ್ 2 ಸೋಮವಾರ ಮಧ್ಯಾಹ್ನ 2 ಗಂಟೆಗೆ ಮಂಗಳೂರಿನಲ್ಲಿ ನಡೆಯಲಿದೆ.
ಜ್ಯೋತಿ ವೃತ್ತದಿಂದ ಪ್ರಾರಂಭಗೊಂಡು ಮಿನಿ ವಿಧಾನಸೌಧ ಮುಂದೆ ಸಮಾರೋಪಗೊಳ್ಳಲಿದೆ.
ರ‍್ಯಾಲಿಗೆ ದ. ಕ ಜಿಲ್ಲೆ ವಕಫ್ ಬೋರ್ಡ್ ಅಧ್ಯಕ್ಷ ಬಿ. ಎ ನಾಸಿರ್ ಲಕ್ಕೀಸ್ಟಾರ್ ಜಾಥಾನಾಯಕರಿಗೆ
ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಲಿದ್ದಾರೆ.
ರ‍್ಯಾಲಿಯಲ್ಲಿ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆಯ ಸುರತ್ಕಲ್, ಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಮುಡಿಪು, ದೇರಳಕಟ್ಟೆ, ಉಳ್ಳಾಲ ಮುಂತಾದ ಏಳು ಝೋನ್ ಹಾಗೂ ಡಿವಿಷನ್ ಗಳ ನೇತೃತ್ವದಲ್ಲಿ ಪ್ರತ್ಯೇಕ ರೀತಿಯಲ್ಲಿ
ರ‍್ಯಾಲಿ ನಡೆಯಲಿದ್ದು ದಫ್, ಸ್ಕೌಟ್ ತಂಡಗಳು ಪಾಲ್ಗೊಳ್ಳಲಿದ್ದು ಅತ್ಯಂತ ಶಿಸ್ತು ಮತ್ತು ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ
ರ‍್ಯಾಲಿ ನಡೆಸಲಾಗುವುದು.
ಸಮಾರೋಪ ಸಮಾರಂಭದಲ್ಲಿ ದ. ಕ ಜಿಲ್ಲಾ ಮುಸ್ಲಿಂ ಜಮಾಅತ್ ಅಧ್ಯಕ್ಷ ಬಿ ಎಂ ಮುಮ್ತಾಝ್ ಅಲಿ ಅಧ್ಯಕ್ಷತೆ ವಹಿಸಲಿದ್ದು ಡಾ ಎಂ ಎಸ್ ಎಂ ಝೈನಿ ಕಾಮಿಲ್ ಮುಖ್ಯ ಭಾಷಣ ಮಾಡಲಿದ್ದಾರೆ.
ಎಸ್ ವೈ ಎಸ್ ಜಿಲ್ಲಾಧ್ಯಕ್ಷ ವಿ ಯು ಇಸಾಕ್ ಝುಹ್ರಿ, ಎಸ್ಸೆಸ್ಸೆಫ್ ಜಿಲ್ಲಾ ಅಧ್ಯಕ್ಷ ಮನ್ಸೂರ್ ಹಿಮಮಿ ಮೊಂಟೆಪದವು, ಎಸ್ ಜೆ ಎಂ ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಮದನಿ ಕೆಸಿರೋಡ್, ಎಸ್ ಎಂ ಎ ಜಿಲ್ಲಾ ಅಧ್ಯಕ್ಷ ಎ. ಪಿ ಇಸ್ಮಾಯಿಲ್ ಅಡ್ಯಾರ್
ಮತ್ತಿತರರು ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್, ಸುನ್ನೀ ಮೇನೇಜ್ ಮೆಂಟ್ ಅಸೋಸಿಯೇಷನ್ ಸೇರಿದಂತೆ ಹಲವು ಸಂಘಟನೆ ಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಇಲಲ್ ಹಬೀಬ್ ಮೀಲಾದ್ ಸಮಿತಿ ಚೇರ್ಮ್ಯಾನ್ ಹಾಫಿಳ್ ಯಾಕೂಬ್ ಸಅದಿ ನಾವೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅಶ್ರಫ್ ಕಿನಾರ ಮಂಗಳೂರು
(ಪ್ರಧಾನ ಕಾರ್ಯದರ್ಶಿ
ಇಲಲ್ ಹಬೀಬ್ ಮೀಲಾದ್ ಸಮಿತಿ), ಅಬ್ದುಲ್ ರಹೀಂ ಸಅದಿ ಕತರ್ (ಪ್ರಧಾನ ಕಾರ್ಯದರ್ಶಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ ಜಿಲ್ಲೆ), ಅಬ್ದುಲ್ ರಹಿಮಾನ್ ಪ್ರಿಂಟೆಕ್ (ಪ್ರಧಾನ ಕಾರ್ಯದರ್ಶಿ ಎಸ್ ವೈ ಎಸ್ ದ. ಕ ಜಿಲ್ಲೆ), ಇರ್ಷಾದ್ ಹಾಜಿ ಗೂಡಿನ ಬಳಿ (ಕೋಶಾಧಿಕಾರಿ ಎಸ್ಸೆಸ್ಸೆಫ್ ದಕ ಜಿಲ್ಲೆ), ಮುಹಮ್ಮದ್ ಅಝ್ಮಲ್ ಕಾವೂರು(ಕೋಶಾಧಿಕಾರಿ ಇಲಲ್ ಹಬೀಬ್ ಮೀಲಾದ್ ಸಮಿತಿ), ಶಾಕಿರ್ ಎಂಎಸ್ಸಿ ಬಜಪೆ
(ಮೀಡಿಯಾ ಕಾರ್ಯದರ್ಶಿ
ಇಲಲ್ ಹಬೀಬ್ ಮೀಲಾದ್ ಸಮಿತಿ) ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ