janadhvani

Kannada Online News Paper

ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಹಸಿರು ಶಾಲು ಹೊದ್ದು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.ದೇವರು ಮತ್ತು ರೈತರ ಹೆಸರಿನಲ್ಲಿ ಅವರು ಪ್ರಮಾಣ ಸ್ವೀಕರಿಸಿದರು.ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.ಹೂಗುಚ್ಚ ನೀಡುವ ಮೂಲಕ ಯಡಿಯೂರಪ್ಪ ಅವರಿಗೆ ವಜುಭಾಯಿ ವಾಲ ಅವರು ಶುಭ ಕೋರಿದರು.ಈ ಮೂಲಕ ಯಡಿಯೂರಪ್ಪ ಅವರು 23ನೇ ಮುಖ್ಯಮಂತ್ರಿಯಾಗಿ ಹಾಗೂ ಮೂರನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿದರು.

10 ನಿಮಿಷದಲ್ಲಿ ಕಾರ್ಯಕ್ರಮ ಮುಕ್ತಾಯವಾಯಿತು. ಬಳಿಕ, ಯಡಿಯೂರಪ್ಪ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಮುಖಂಡರು ಹೂ ಗುಚ್ಚಗಳನ್ನು ನೀಡಿ ಅಭಿನಂದಿಸಿದರು.