janadhvani

Kannada Online News Paper

ಚೈತ್ರಾ ಕುಂದಾಪುರ: ಕೋಟಿ ಕೋಟಿ ವಂಚನೆ ಪ್ರಕರಣ- ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

ಚೈತ್ರ ಇಡಿ ಗೆ ಬರೆದ ಪತ್ರದಲ್ಲಿ ವಜ್ರಾದೇಹಿ ಶ್ರೀ, ಚಕ್ರವರ್ತಿ ಸೂಲಿಬೆಲೆ, ಹಾಗೂ ಸಿಟಿ ರವಿ ಹೆಸರು ಉಲ್ಲೇಖವಾಗಿತ್ತು.

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಚೈತ್ರಾ ಅಂಡ್ ಗ್ಯಾಂಗ್ ಸದ್ಯ ಜೈಲು ಸೇರಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್ ನೀಡಿದೆ.

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬೈಂದೂರಿನ ಬಿಜೆಪಿ ಟಿಕೇಟ್ ನೀಡುವ ವಿಚಾರವಾಗಿ ಡೀಲ್ ನಡೆದು ಚೈತ್ರ ಕುಂದಾಪುರ ಬಂಧನ ಆದ ನಂತರ ಚೈತ್ರ ಇಡಿ ಗೆ ಬರೆದ ಪತ್ರದಲ್ಲಿ ವಜ್ರಾದೇಹಿ ಶ್ರೀ, ಚಕ್ರವರ್ತಿ ಸೂಲಿಬೆಲೆ, ಹಾಗೂ ಸಿಟಿ ರವಿ ಹೆಸರು ಉಲ್ಲೇಖವಾಗಿತ್ತು.

ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಸದ್ಯದಲ್ಲೇ ವಜ್ರದೇಹಿ ಸ್ವಾಮೀಜಿ ಸಿಸಿಬಿ ವಿಚಾರಣೆ ಎದುರಿಸಲಿದ್ದಾರೆ.

ಗೋವಿಂದ ಪೂಜಾರಿ ಟಿಕೆಟ್ ಪ್ರಕರಣಕ್ಕೆ ಸಂಬಂಧಿಸಿ ರಾಜಶೇಖರಾನಂದ ಸ್ವಾಮೀಜಿ ಅವರು ತನಗೆ ಫೋನ್ ಮಾಡಿದ್ದರು ಎಂದು ಚೈತ್ರಾ ಅವರು ಆದಾಯ ತೆರಿಗೆ ಇಲಾಖೆಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಉಲ್ಲೇಖವಾಗಿತ್ತು.

ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರವರಾದ ರೀನಾ ಸುವರ್ಣ ಅವರು ವಜ್ರಾದೇಹಿ ಶ್ರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣದ ಪ್ರಧಾನ ಆರೋಪಿಯಾಗಿರುವ ಚೈತ್ರಾ ಎರಡನೇ ಆರೋಪಿ ಗಗನ್ ಕಡೂರು, ನಾಲ್ಕನೇ ಆರೋಪಿ ರಮೇಶ್ ಕಡೂರು, ಐದನೇ ಆರೋಪಿ ಚನ್ನಾ ನಾಯ್ಕ ಆರನೇ ಆರೋಪಿ ಧನರಾಜ್ ಏಳನೇ ಆರೋಪಿ, ಚೈತ್ರಾ ಕುಂದಾಪುರಳ ಆಪ್ತ ಗೆಳೆಯ ಶ್ರೀಕಾಂತ್ ನಾಯಕ್ ಹಾಗೂ ಎಂಟನೇ ಆರೋಪಿ ಪ್ರಸಾದ್ ಬೈಂದೂರು ಅವರು 10 ದಿನಗಳ ಸಿಸಿಬಿ ಕಸ್ಟಡಿ ಮುಗಿಸಿದ್ದು, ನಂತರ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು.

error: Content is protected !! Not allowed copy content from janadhvani.com