ಪುತ್ತೂರು : ಕರ್ನಾಟಕ ರಾಜ್ಯ ಸುನ್ನೀ ಮ್ಯಾನೇಜ್ ಮೆಂಟ್ ಎಸೋಸಿಯೇಷನ್ SMA ರಾಜ್ಯ ಸಮಿತಿಯ ಮದ್ರಸ ನಿರ್ಮಾಣ ಯೋಜನೆಯಡಿಯಲ್ಲಿ ಪುತ್ತೂರು ತಾಲೂಕಿನ ಕಾವು ಸಮೀಪದ ಅಂಚಿನಡ್ಕ ಬದಿಯಡ್ಕದಲ್ಲಿ ನಿರ್ಮಿಸಿದ ನೂತನ ಮದ್ರಸದ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ಜರುಗಿತು.
ಎಸ್ ಎಂ ಎ ಬೆಳ್ಳಾರೆ ಝೋನ್ ಅಧ್ಯಕ್ಷರು ಮತ್ತು ಸ್ವಾಗತ ಸಮಿತಿ ಅಧ್ಯಕ್ಷರಾದ ಜನಾಬ್ ಇಬ್ರಾಹಿಂ ಬೀಡು ರವರು ಧ್ವಜಾರೋಹಣ ನೆರವೇರಿಸಿದರು
ನೂತನ ಮದ್ರಸವನ್ನು ಎಸ್. ಎಂ. ಎ. ರಾಜ್ಯಾಧ್ಯಕ್ಷರಾದ ಸಯ್ಯಿದ್ ಇಸ್ಮಾಯಿಲ್ ಅಲ್ ಹಾದೀ ತಂಙಳ್ ಉದ್ಘಾಟಿಸಿದರು.
ಸಭಾ ಕಾರ್ಯಕ್ರಮವನ್ನು ಎಸ್ ಎಂ. ಎ. ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ ಹಾಜ್ ಎನ್.ಎ. ಅಬ್ದುಲ್ ರಹ್ಮಾನ್ ಮದನಿ ಜೆಪ್ಪು ಉದ್ಘಾಟಿಸಿದರು. ಕರ್ನಾಟಕ ಸುನ್ನೀ ಜಂ ಇಯ್ಯತ್ತುಲ್ ಉಲಮಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ ಹಾಜ್ ಕೆ.ಪಿ.ಹುಸೈನ್ ಸಅದಿ ಕೆ.ಸಿ. ರೋಡ್ ಮುಖ್ಯ ಪ್ರಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್.ಜೆ.ಎಂ.ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ.ಕಾಮಿಲ್ ಸಖಾಫಿ ಸುರಿಬೈಲ್, ಎಸ್.ವೈ.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸಾದಿಕ್ ಮಾಸ್ಟರ್, ಮುಫತ್ತಿಶ್ ಹಾಫಿಲ್ ಮುಹಮ್ಮದ್ ಹನೀಫ್ ಮಿಸ್ಬಾಹಿ ಗೇರುಕಟ್ಟೆ, ಎಸ್.ಎಂ.ಎ.ದ.ಕ.ವೆಸ್ಟ್ ಜಿಲ್ಲಾಧ್ಯಕ್ಷರಾದ ಅಡ್ಯಾರ್ ಪದವು ಎ.ಪಿ.ಇಸ್ಮಾಯೀಲ್, ಎಸ್.ಎಂ.ಎ.ರಾಜ್ಯ ಉಪಾಧ್ಯಕ್ಷ ಎ.ಕೆ.ಅಹ್ಮದ್, ರಾಜ್ಯ ಕಾರ್ಯದರ್ಶಿ ಎನ್.ಎಸ್.ಉಮರ್ ಮಾಸ್ಟರ್, ಎಸ್.ಜೆ.ಎಂ.ರಾಜ್ಯ ಕೋಶಾಧಿಕಾರಿ ಪುಂಡೂರು ಇಬ್ರಾಹೀಂ ಸಖಾಫಿ, ಎಸ್.ಎಂ.ಎ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಕೆ.ಇಬ್ರಾಹೀಂ ಸಖಾಫಿ ಕಬಕ, ಶ್ರೀ ಹೇಮನಾಥ ಶೆಟ್ಟಿ ಕಾವು, ಮುಸ್ತಫಾ ಗಾಂಧಿನಗರ ಸುಳ್ಯ, ಕೊಳ್ತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪವನ್. ದಿವ್ಯ ನಾಥ ಶೆಟ್ಟಿ ಸದಸ್ಯರು ಗ್ರಾಮ ಪಂಚಾಯತ್ ಅರಿಯಡ್ಕ. ವೆಂಕಟರಮಣ ಗೌಡ. ಪ್ರಮೋದ್ ಕುಮಾರ್ ಹಾಗೂ ರಾಜಕೀಯ ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಮತ್ತು ಸುನ್ನಿ ಸಂಘ ಕುಟುಂಬದ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಮದ್ರಸ ಉದ್ಘಾಟನೆಗೆ ಮುಂಚಿತವಾಗಿ ಎಸ್. ಎಂ. ಎ. ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಸಯ್ಯಿದ್ ಸಾದಾತ್ ತಂಙಳ್ ಕರ್ವೇಲುರವರ ನೇತೃತ್ವದಲ್ಲಿ ಮೌಲಿದ್ ಮಜ್ಲಿಸ್ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಕೋಶಾಧಿಕಾರಿ ಅಬ್ದುಲ್ ಹಮೀದ್ ಹಾಜಿ ಕೊಡುಂಗಾಯಿ ಪ್ರಾಸ್ತಾವಿಕ ಭಾಷಣ ಮಾಡಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಎಸ್. ಎಂ. ಎ. ರಾಜ್ಯ ಕಾರ್ಯದರ್ಶಿ ಕೆ.ಎ.ಅಶ್ರಫ್ ಸಖಾಫಿ ಮೂಡಡ್ಕ ಸ್ವಾಗತಿಸಿ ಕೊನೆಯಲ್ಲಿ ಸ್ವಾಗತ ಸಮಿತಿ ಕನ್ವೀನರ್ ಅಬ್ದುಲ್ ಹಮೀದ್ ಸುಣ್ಣಮೂಲೆ ವಂದಿಸಿದರು.