ಬೆಂಗಳೂರು: ಕಾಂಗ್ರೆಸ್ ಶಾಸಕರೆಲ್ಲರೂ ಒಟ್ಟಿಗೆ ಇದ್ದೇವೆ. ಎಲ್ಲರೂ ನಮ್ಮ ಜತೆಯಲ್ಲಿದ್ದಾರೆ. ಆನಂದ್ ಸಿಂಗ್ ಸಹ ನಮ್ಮ ಸಂಪರ್ಕದಲ್ಲಿದ್ದಾರೆ. ಹಾಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದು ಶತಃ ಸಿದ್ಧ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಡಿಕೆಶಿ ಬಿಜೆಪಿಗೆ ಮ್ಯಾಜಿಕ್ ನಂಬರ್ ಸಿಗುವುದಿಲ್ಲ. ಹಾಗಾಗಿ ಬಿಎಸ್ವೈಗೆ ಆತಂಕ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ರಾಜ್ಯದ ಜನತೆಯ ಅನುಕಂಪ ಗಿಟ್ಟಿಸಲು ಸಾಲ ಮನ್ನಾ ಅಸ್ತ್ರ ಪ್ರಯೋಗಿಸಿದ್ದಾರೆ. ಮೆಜಾರಿಟಿ ಇಲ್ಲದ ಪಕ್ಷ ಹೇಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಡಿಕೆಶಿ ಬಿಎಸ್ವೈ ವಿರುದ್ಧ ಕಿಡಿ ಕಾರಿದರು.
ಸುಪ್ರೀಂ ಕೋರ್ಟ್ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಆಪರೇಷನ್ ಕಮಲ ಅಸಾಧ್ಯವಾದ ಮಾತು. ನಮ್ಮ ಶಾಸಕರ ರಕ್ಷಣೆಗೆ ರೆಸಾರ್ಟ್ ರಾಜಕೀಯ ಅನಿವಾರ್ಯವಾಗಿದೆ ಎಂದು ಡಿಕೆಶಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ