ದೆಹಲಿ: ಬಿಜೆಪಿ ಪಕ್ಷಕ್ಕೆ ಸರಕಾರ ರಚಿಸಲು ಆಹ್ವಾನ ನೀಡಿದ ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮವನ್ನು ಪ್ರಶ್ನಿಸಿ, ಹಿರಿಯ ವಕೀಲ ರಾಮ್ ಜೇಠ್ಮಲಾನಿ ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯಪಾಲರ ತೀರ್ಮಾನದ ವಿರುದ್ಧ ವೈಯಕ್ತಿಕ ಸಾಮಥ್ರ್ಯದ ಮೇಲೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿರುವ ಜೇಠ್ಮಲಾನಿ, ಗೌರ್ನರ್ ಅವರ ಆದೇಶವು ಸಂವಿಧಾನದ ಪರಮಾಧಿಕಾರವನ್ನು ಸಂಪೂರ್ಣ ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.
ಅರ್ಜಿ ಸಲ್ಲಿಸಿದ್ದಕ್ಕೆ ಪ್ರತಿಯಾಗಿ, ನ್ಯಾಯಾಲಯವು ನಾಳೆ ಸೂಕ್ತ ಪೀಠದ ಎದುರು ಪ್ರಸ್ತಾಪ ಮಾಡುವಂತೆ ಜೇಠ್ಮಲಾನಿಗೆ ಸೂಚಿಸಿದೆ. ಕರ್ನಾಟಕದಲ್ಲಿ ಸರಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದ ರಾಜ್ಯಪಾಲರ ನಡೆಗೆ ಹಿರಿಯ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.