janadhvani

Kannada Online News Paper

ಶಾಂತಿಭಂಗ ಹಾಗೂ ಕೋಮು ಪ್ರಚೋದನೆ- ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲು

ಹಿಂದೂಗಳು ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ವ್ಯಾಪಾರಿಗಳ ಅಂಗಡಿಗಳಿಂದ ಮಾತ್ರ ಪಡೆದುಕೊಳ್ಳುವಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಶರಣ್

ಮಂಗಳೂರು, ಅ.18:ಇಲ್ಲಿನ ಶ್ರೀ ಮಂಗಳಾದೇವಿ ದೇವಸ್ಥಾನದ ಹಿಂದೂ ವ್ಯಾಪಾರಸ್ಥರ ಅಂಗಡಿಗಳ ಮೇಲೆ ಕೇಸರಿ ಧ್ವಜ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ.

ಅ.16ರಂದು ಶರಣ್ ಪಂಪ್‌ವೆಲ್ ತನ್ನ ಬೆಂಬಲಿಗರೊಂದಿಗೆ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಠಾರದಲ್ಲಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ನೆಟ್ಟಿದ್ದಲ್ಲದೆ ಹಿಂದೂಗಳು ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ವ್ಯಾಪಾರಿಗಳ ಅಂಗಡಿಗಳಿಂದ ಮಾತ್ರ ಪಡೆದುಕೊಳ್ಳುವಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ.

ಈ ಕೃತ್ಯವು ಭಿನ್ನಕೋಮಿನ ನಡುವೆ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದಾಗಿದೆ. ಅದರಂತೆ ದಕ್ಷಿಣ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸೈ ಮನೋಹರ್ ಪ್ರಸಾದ್‌ ದೂರಿನ ಮೇಲೆ ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲು ಮಾಡಿಕೊಂಡು, ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಶರಣ್ ಪಂಪ್ವೆಲ್ ಬಂಧನಕ್ಕೆ ಆಗ್ರಹ

ಇಂದು ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ, ಎಡಪಂಥೀಯ ಸಂಘಟನೆಗಳ ನಿಯೋಗ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ, ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹಿಸಿದ್ದರು.

error: Content is protected !! Not allowed copy content from janadhvani.com