ನೆಲ್ಯಾಹುದಿಕೇರಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್‌ವೈಎಸ್) 30ನೇ ವರ್ಷಾಚರಣೆಯ ಪ್ರಯುಕ್ತ ‘ಪರಂಪರೆಯ ಪ್ರತಿನಿಧಿಗಳಾಗೋಣ’ ಎಂಬ ಧ್ಯೇಯ ವಾಕ್ಯದಡಿಯಲ್ಲಿ 2024 ರ ಜನವರಿ 24ರಂದು ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನದ ಪ್ರಚಾರಾರ್ಥ ಕೊಡಗು ಜಿಲ್ಲಾ ಸಮಿತಿ ಆಯೋಜಿಸಿದ ರಾಜ್ಯ ಸಮಿತಿ ನಾಯಕರ ಜ್ಯೂಬಿಲಿ ಜರ್ನಿ ಕಾರ್ಯಕ್ರಮವು ನೆಲ್ಯಾಹುದಿಕೇರಿಯ ದಾರುನ್ನಜಾತ್ ಹಾಗೂ ಕಡಂಗದ ಬದ್ರಿಯ ಮದ್ರಸದಲ್ಲಿ ನಡೆಯಿತು.

30 ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಸಮಾಜ ಸೇವೆ ಸಹಿತ ಹಲವಾರು ಕಾರ್ಯಕ್ರಮಗಳನ್ನು ವಿವಿಧ ಘಟಕಗಳಲ್ಲಿ ಹಮ್ಮಿಕೊಂಡಿದ್ದು, ಅವುಗಳೆಲ್ಲವನ್ನೂ ಕಾರ್ಯರೂಪಕ್ಕೆ ತಂದು ಯಶಸ್ವಿಗೊಳಿಸಿ ಸೇವಾ ಮನೋಭಾವವಿರುವ ಉತ್ತಮ ಕಾರ್ಯಕರ್ತರನ್ನು ಸೃಷ್ಟಿಸುವಂತೆಯೂ ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆಯೂ ಎಸ್‌ವೈಎಸ್ ರಾಜ್ಯಾಧ್ಯಕ್ಷರಾದ ಹಫೀಳ್ ಸಅದಿ ಕರೆ ನೀಡಿದರು.
ಜಿಲ್ಲಾಧ್ಯಕ್ಷರಾದ ಅಬ್ದುಲ್ ಹಮೀದ್ ಮುಸ್ಲಿಯಾರ್‌ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್ ಮಾತನಾಡಿ ಕಾರ್ಯಚಟುವಟಿಕೆಗಳ ರೂಪುರೇಷೆಗಳನ್ನು ವಿವರಿಸಿದರು.

ಕೋಶಾಧಿಕಾರಿ ಅಡ್ವಕೇಟ್ ಹಂಝತ್ ಉಡುಪಿ ,ದಅವಾ ವಿಭಾಗ ಕಾರ್ಯದರ್ಶಿ ಸಯ್ಯಿದ್ ಶಾಫಿ ನಈಮಿ ತಂಙ್ಙಳ್, ಸಾಂತ್ವನ ವಿಭಾಗ ಕಾರ್ಯದರ್ಶಿಯೂ ಕೊಡಗು ಜಿಲ್ಲಾ ಉಸ್ತುವಾರಿಯೂ ಆದಂತಹ ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ, ಮಾಧ್ಯಮ ಕಾರ್ಯದರ್ಶಿ ಹಸೈನಾರ್ ಆನೆಮಹಲ್, ಸಯ್ಯಿದ್ ಇಲ್ಯಾಸ್ ತಂಙ್ಙಳ್, ವಿ ಪಿ ಮೊಯ್ದೀನ್, ಅಬ್ದುಲ್ಲ, ಆಸಿಫ್ ಸೇರಿದಂತೆ ಇನ್ನಿತರ ರಾಜ್ಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲಾ ಕಾರ್ಯದರ್ಶಿ ಅಹಮದ್ ಮದನಿ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)