janadhvani

Kannada Online News Paper

ಕರ್ನಾಟಕದ 24 ನೇ ಮುಖ್ಯಮಂತ್ರಿಯಾಗಿ ಬುಧವಾರದಂದು ಕುಮಾರಸ್ವಾಮಿ ಪದಗ್ರಹಣ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿಯವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು. ಬುಧವಾರದಂದು  ಕುಮಾರಸ್ವಾಮಿ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.

ಸೋಮವಾರ ಬೆಳಗ್ಗೆ ಕಂಠೀರವ ಸ್ಟೇಡಿಯಂನಲ್ಲಿ ತಾನು ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ನಡುವೆಯೇ ಇದೀಗ ಪ್ರಮಾಣವಚನ ಕಾರ್ಯಕ್ರಮವನ್ನು ಮುಂದೂಡಲು ಕಾರಣವೇನೆಂದರೆ ಅಂದು ರಾಜೀವ್ ಗಾಂಧಿ ಪುಣ್ಯತಿಥಿಯಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸಹಿತ ಪ್ರಮುಖ ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಹಾಗೂ  ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಿದ್ದು, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಬುಧವಾರಕ್ಕೆ ಮುಂದೂಡಲು ಕುಮಾರಸ್ವಾಮಿ ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಮಧ್ಯೆ ಮಂಗಳವಾರ ಶುಭದಿನ ಅಲ್ಲ ಎಂದು ಪ್ರಮಾಣವಚನ ಕಾರ್ಯಕ್ರಮವನ್ನು ಬುಧವಾರಕ್ಕೆ ನಿಗದಿಪಡಿಸಲಾಗಿದೆ ಎನ್ನಲಾಗಿದೆ.  ಬುಧವಾರವೇ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತಗೊಂಡಿದೆ ಎನ್ನಲಾಗಿದೆ.

ರಾಜ್ಯದಲ್ಲಿ 24 ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರ ಸ್ವಾಮಿ ಅವರು ಎರಡನೇ ಬಾರಿ ಅಧಿಕಾರ ಸ್ವೀಕಾರ ಮಾಡಲಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿವಿಧ ರಾಜ್ಯಗಳ, ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಎಸ್‌ಪಿ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ಇನ್ನಿತರ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ.

error: Content is protected !! Not allowed copy content from janadhvani.com