ಜಿಸಿಸಿ ರೈಲ್ವೇ ಯೋಜನೆಯ ಮೊದಲ ಹಂತದ ತಯಾರಿ ಕುವೈತ್ನಲ್ಲಿ ಆರಂಭವಾಗಿದೆ. ಮೊದಲ ಹಂತದಲ್ಲಿ ಟೆಂಡರ್ ಖಚಿತಪಡಿಸಲು ಯೋಜನೆಯ ತಾಂತ್ರಿಕ ಬಿಡ್ ತೆರೆದು ಪರಿಶೀಲನೆ ಪೂರ್ಣಗೊಂಡಾಗ ಒಂಬತ್ತು ಕಂಪನಿಗಳು ಉಳಿದಿವೆ.
ಕಂಪನಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಲು ರಸ್ತೆಗಳು ಮತ್ತು ಸಾರಿಗೆ ಸಾರ್ವಜನಿಕ ಪ್ರಾಧಿಕಾರಕ್ಕೆ ಅನುಮತಿ ನೀಡಲಾಗಿದೆ. ಅಧಿಕಾರಿಗಳು ಶೀಘ್ರದಲ್ಲೇ ಬಿಡ್ ಪರಿಶೀಲನೆಯನ್ನು ಪೂರ್ಣಗೊಳಿಸಿ ಒಪ್ಪಂದವನ್ನು ದೃಢೀಕರಿಸುವ ಭರವಸೆ ಹೊಂದಿದ್ದಾರೆ.
ಮೊದಲ ಹಂತದಲ್ಲಿ ಸೌದಿ ಅರೇಬಿಯಾದ ದಕ್ಷಿಣ ಗಡಿಯಿಂದ ಕುವೈತ್ ಸಿಟಿವರೆಗೆ ರೈಲು ಮಾರ್ಗ ನಿರ್ಮಾಣವಾಗಲಿದೆ. ಪ್ರಯಾಣ ಮತ್ತು ಸರಕು ಸಾಗಣೆಯನ್ನು ಸುಲಭ ಮತ್ತು ವೆಚ್ಚ ಕಡಿಮೆ ಗೊಳಿಸುವ ಕಾರಣದಿಂದ ಈ ರೈಲ್ವೇ ಸಾರಿಗೆ ವಲಯದಲ್ಲಿ ಪ್ರಮುಖ ಬದಲಾವಣೆಯನ್ನು ತರಲಿದೆ.
GCC ಸದಸ್ಯ ರಾಷ್ಟ್ರಗಳಲ್ಲಿ ವಾಣಿಜ್ಯ ಚಲನೆಯನ್ನು ಸುಲಭಗೊಳಿಸುವ ಉದ್ದೇಶದಿಂದ ಗಲ್ಫ್ ರೈಲ್ವೆ ಯೋಜನೆಯನ್ನು ರಚಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ