janadhvani

Kannada Online News Paper

ನಾಳೆ ಎಸ್‌ವೈಎಸ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಯುವಜನೋತ್ಸವ

ಮಂಗಳೂರು: ಎಸ್‌ವೈಎಸ್ ಕರ್ನಾಟಕ ಇದರ ಮೂವತ್ತನೇ ವಾರ್ಷಿಕ ಮಹಾ ಸಮ್ಮೇಳನವು 2024 ಜನವರಿ 24ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಅದರ ಪ್ರಚಾರಾರ್ಥ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಯುವಜನೋತ್ಸವ ಕಾರ್ಯಕ್ರಮವು ನವೆಂಬರ್ 14 (ನಾಳೆ) ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

ಜಿಲ್ಲಾಧ್ಯಕ್ಷ ಇಸ್‌ಹಾಕ್ ಝುಹ್ರಿ ಯವರ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 2-30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, 5 ತನಕ ಎಸ್‌ವೈಎಸ್ ಕಾರ್ಯಕರ್ತರಿಗೆ ವಿಶೇಷ ಸಾಂಘಿಕ ತರಗತಿ ನಡೆಯಲಿದೆ. ಸಂಜೆ 5 ಗಂಟೆಗೆ ಸಾರ್ವಜನಿಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ವೈಎಸ್, ಎಸ್ಸೆಸ್ಸೆಫ್ ಸಂಘ ಕುಟುಂಬದ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಜಲಾಲುದ್ದೀನ್ ಸ‌ಅದಿ ತಂಙಳ್ ಮಳ್‌ಹರ್, ಹಂಝ ಮಿಸ್ಬಾಹಿ ಓಟ್ಟಪಡವು, ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್, ಹಫೀಳ್ ಸ‌ಅದಿ ಕೊಳಕೇರಿ, ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು ಮುಂತಾದವರು ನೇತೃತ್ವ ನೀಡಲಿದ್ದಾರೆಂದು ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಪ್ರಿಂಟೆಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com