ಉಡುಪಿ: ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ತಾಯಿ, ಮಕ್ಕಳ ಕಗ್ಗೋಲೆ ಪ್ರಕರಣಕ್ಕೆ ಸಂಬಂಧಿಸಿ ಹಂತಕ ಪ್ರವೀಣ್ ಅರುಣ್ ಚೌಗಲಿ ಎಂಬಾತನನ್ನು ಬಂಧಿಸಲಾಗಿದ್ದು, ಪೋಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಾಲ್ವರನ್ನು ಹತ್ಯೆಮಾಡಲು ಕೊಲೆಗೀಡಾದ ಐನಾಝ್ ಳೊಂದಿಗಿನ ದ್ವೇಷವೇ ಪ್ರಮುಖ ಕಾರಣ ಎಂದು ಪೋಲೀಸರು ತಿಳಿಸಿದ್ದಾರೆ. ಕೊಲೆಗೆ ಮೂರು ಉದ್ದೇಶವನ್ನು ಹಂತಕ ವಿಚಾರಣೆ ವೇಳೆ ತಿಳಿಸಿದ್ದು, ಈ ಬಗ್ಗೆ ಸಂತ್ರಸ್ಥ ಕುಟುಂಬದೊಂದಿಗೆ ಪರಿಶೀಲಿಸಿ ಮಾಹಿತಿ ನೀಡುತ್ತೇವೆ ಎಂದು ಜಿಲ್ಲಾ ಎಸ್ಪಿ ಡಾ.ಕೆ. ಅರುಣ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿ ಎಸ್ಪಿ ಕಚೇರಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತನೆ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದರು.
ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರವೀಣ್ ಗಗನಸಖಿ ಐನಾಝ್ ಮೇಲಿನ ದ್ವೇಷದಲ್ಲಿ ಈ ಕೊಲೆ ಮಾಡಿದ್ದಾನೆ. ತಡೆಯಲು ಬಂದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕೂಡ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಅವರು ಹೇಳಿದರು.ಇದೊಂದು ಪೂರ್ವನಿಯೋಜಿತವಾಗಿ ಕೃತ್ಯ ಎಂದು ಹೇಳಿದರು. ವಿವಾಹಿತನಾಗಿರುವ ಆರೋಪಿ, ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ ಎಂದು ಎಸ್ಪಿ ತಿಳಿಸಿದರು.
ಐನಾಝ್ ಕೊಲೆಯಾದ ದಿನವೇ ಬೆಳಿಗ್ಗೆ 11 ಗಂಟೆಗೆ ದುಬೈಗೆ ಏರ್‌ಇಂಡಿಯಾ ವಿಮಾನದಲ್ಲಿ ಗಗನ ಸಖಿಯಾಗಿ ಕಾರ್ಯನಿರ್ವಹಿಸಲು ಹೋಗಬೇಕಿತ್ತು. ಆದರೆ ಅಂದೇ ಬೆಳಿಗ್ಗೆ ಯಮರೂಪಿಯಾಗಿ ಬಂದ ಪ್ರವೀಣ್ ಮನೆಯಲ್ಲಿದ್ದ ನಾಲ್ವರನ್ನು ಹತ್ಯೆಗೈದು ಪರಾರಿಯಾಗಿದ್ದ.
ನಾಲ್ವರನ್ನು ಹತ್ಯೆಗೈದು ಬಸ್ ಮೂಲಕ ಮಂಗಳೂರಿಗೆ ಹೋಗಿ ಅಲ್ಲಿಂದ ತನ್ನ ಹೆಕ್ಟರ್ ಕಾರಿನಲ್ಲಿ ಬೆಳಗಾವಿಗೆ ಹೋಗಿ ಪರಿಚಯದ ನೀರಾವರಿ ಇಲಾಖೆಯ ಅಧಿಕಾರಿ ಮನೆಯಲ್ಲಿ ಒಂದು ದಿನ ಅಡಗಿದ್ದ. ಅಲ್ಲಿಂದ ನೇರ ತನ್ನೂರು ಸಾಂಗ್ಲಿಗೆ ಹೋಗಿ ಅವಿತುಕೊಳ್ಳುವ ಪ್ಲಾನ್ ರೂಪಿಸಿದ್ದ ಹಂತಕ,
ಕೊಲೆಯಾದ ತಕ್ಷಣ ಎಲರ್ಟ್ ಆದ ಪೊಲೀಸರು ಐನಾಝ್ ದುಡಿಯುತ್ತಿದ್ದ ಏರ್‌ಪೋರ್ಟ್‌ಗೆ ಭೇಟಿ ನೀಡಿ ಉದ್ಯೋಗಿಗಳ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲಿ ರಜೆ ಹಾಕಿದ್ದ ಪ್ರವೀಣ್ ಮಾಹಿತಿ ಕಲೆ ಹಾಕಿ ಫೋನ್ ಟ್ರಾಕ್ ಮಾಡಿದ್ದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್