ಮಸ್ಕತ್ : ಮಸ್ಕತ್ ನಿಂದ ಮುಂಬೈಗೆ ತೆರಳುತ್ತಿದ್ದ ವಿಮಾನದಲ್ಲಿ ಯುವಕನೊಬ್ಬ ಧೂಮಪಾನ ಮಾಡಿದ್ದು, ಸಿಕ್ಕಿಬಿದ್ದಿದ್ದಾನೆ. ಬೆಂಗಳೂರು ಮೂಲದ 27 ವರ್ಷದ ಕಬೀರ್ ಸೈಫ್ ರಿಝ್ವಿ ಎಂಬಾತನನ್ನು ಸಹರ್ ಪೊಲೀಸರು ಬಂಧಿಸಿದ್ದಾರೆ. ಮಸ್ಕತ್ ನಿಂದ ಮುಂಬೈಗೆ ತೆರಳುತ್ತಿದ್ದ ಓಮಾನ್ ಏರ್ ವಿಮಾನದಲ್ಲಿ ಈ ಘಟನೆ ನಡೆದಿದೆ.
ಬಂಧಿತ ಯುವಕ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದಾನೆ. ಶೌಚಾಲಯದಿಂದ ಹೊರ ಬಂದ ಕೂಡಲೇ ವಿಮಾನ ಸಿಬ್ಬಂದಿ ಯುವಕನನ್ನು ಹಿಡಿದು ಸಹರ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನಿಂದ ಲೈಟರ್, ಸಿಗರೇಟ್ ಪ್ಯಾಕೆಟ್ ಹಾಗೂ ಹಾನಿಗೊಳಗಾದ ಆಮ್ಲಜನಕ ಕಿಟ್ ವಶಪಡಿಸಿಕೊಳ್ಳಲಾಗಿದೆ. ಆತನನ್ನು ಐಪಿಸಿ ಸೆಕ್ಷನ್ 336ರ ಅಡಿಯಲ್ಲಿ ಬಂಧಿಸಲಾಗಿದೆ.ಇದು ಇತರರ ಜೀವಕ್ಕೆ ಅಪಾಯವನ್ನುಂಟುಮಾಡಲು ಯತ್ನಿಸಿರುವ ಅಪರಾಧವಾಗಿದೆ .
ಈ ವರ್ಷ ಇಲ್ಲಿಯವರೆಗೆ, ಧೂಮಪಾನಕ್ಕೆ ಸಂಬಂಧಿಸಿದ 13 ಪ್ರಕರಣಗಳು ದಾಖಲಾಗಿವೆ. ಈ ವರ್ಷದ ಜುಲೈನಲ್ಲಿ ಜಿದ್ದಾ-ಮುಂಬೈ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸಿಕ್ಕಿಬಿದ್ದಿದ್ದರು. ವಿಮಾನದಲ್ಲಿ ಧೂಮಪಾನ ಮಾಡುವುದು ಸಹ ಪ್ರಯಾಣಿಕರ ಜೀವಕ್ಕೆ ಅಪಾಯ ಹಾಗೂ ವಿಮಾನಕ್ಕೆ ಬೆಂಕಿ ಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ ಎಂಬ ಕಾರಣಕ್ಕೆ ಕಠಿಣ ನಿಯಂತ್ರಣ ಏರ್ಪಡಿಸಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ