janadhvani

Kannada Online News Paper

ತೀರ್ಥಹಳ್ಳಿಯ ಜುನೈದ್ ಅಲ್ ಕಸ್ರಾದಲ್ಲಿ ನಿಧನ- ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ  ನಿವಾಸಿ ಜುನೈದ್‌ರವರು ಇತ್ತೀಚೆಗೆ ಹೃದಯಾಘಾತದಿಂದ ಸೌದಿ ಅರೇಬಿಯಾದ ರಿಯಾದಿನಿಂದ 375 ಕಿ.ಮೀ ದೂರದಲ್ಲಿರುವ ಅಲ್ ಕಸ್ರಾದಲ್ಲಿ  ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ರಿಯಾದ್ ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.

18/11/2023ರಂದು ಹೃದಯಾಘಾತದಿಂದ ಮರಣ ಹೊಂದಿದ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .

ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ದಾಖಲೆಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ರಾಷ್ಟ್ರೀಯ ಸಮಿತಿ ನಾಯಕರಾದ ಭಾಷಾ ಗಂಗಾವಳಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ಸಹೋದ್ಯೋಗಿ ಮತ್ತು ಕುಟುಂಬಸ್ಥರಾದ ರಿಝ್ವಾನ್ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ  ನಿಭಾಯಿಸಿದ್ದಾರೆ.

ರಿಯಾದಿನ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ನಡೆದ ಜನಾಝ ನಮಾಝ್ ಮತ್ತು ದಫನ ಕಾರ್ಯದಲ್ಲಿ ಸನಯ್ಯ ಸೆಕ್ಟರ್ ಶಿಕ್ಷಣ ಇಲಾಖೆ ಅಧ್ಯಕ್ಷರಾದ ಜಲಾಲುದ್ದೀನ್ ಸ‌ಅದಿ ಉಸ್ತಾದರ ನೇತೃತ್ವದಲ್ಲಿ ಕೆಸಿಎಫ್ ರಾಷ್ಟ್ರೀಯ ನೇತಾರರು ಝೋನ್ ನೇತಾರರು ಕಾರ್ಯಕರ್ತರು ಕುಟುಂಬಸ್ಥರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

error: Content is protected !! Not allowed copy content from janadhvani.com