ಬೆಂಗಳೂರು: ಚೀನಾದಲ್ಲಿ ಕೊರೊನಾ ವೈರಸ್ ಬಳಿಕ ಈಗ ಮತ್ತೆ ಇನ್‌ಫ್ಲುಯೆನ್ಸಾ ವೈರಸ್ ಭೀತಿ ಹೆಚ್ಚಾಗಿದೆ. ಅದರಲ್ಲೂ ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳು ಉಲ್ಬಣದಿಂದ ಕೇಂದ್ರದ ನಿರ್ದೇಶನದ ನಂತರ ಕನಿಷ್ಠ ಐದು ರಾಜ್ಯಗಳು ತಮ್ಮ ಆರೋಗ್ಯ ಮೂಲಸೌಕರ್ಯವನ್ನು ಅಲರ್ಟ್ ಮೋಡ್‌ನಲ್ಲಿ ಇಡಲು ಸಜ್ಜಾಗಿದೆ. ರಾಜಸ್ಥಾನ, ಕರ್ನಾಟಕ, ಗುಜರಾತ್, ಉತ್ತರಾಖಂಡ ಮತ್ತು ತಮಿಳುನಾಡಿನ ರಾಜ್ಯ ಸರ್ಕಾರಗಳು ಉಸಿರಾಟದ ಸಮಸ್ಯೆಗಳ ಬಗ್ಗೆ ಕಂಡುಬಂದ ರೋಗಿಗಳನ್ನು ನಿಭಾಯಿಸಲು ಆಸ್ಪತ್ರೆಗಳು ಮತ್ತು ಆರೋಗ್ಯ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಕೇಳಿಕೊಂಡಿವೆ.
ಕರ್ನಾಟಕದ ಮಾರ್ಗಸೂಚಿ
ಇನ್ನು ಈ ವೈರಸ್ ಬಗ್ಗೆ ನಾಗರಿಕರು ಜಾಗೃತರಾಗಿರಲು ಕರ್ನಾಟಕ ಆರೋಗ್ಯ ಇಲಾಖೆ ಸಹ ಕೇಳಿಕೊಂಡಿದೆ. ಇನ್ನು ಈ ಮಾರ್ಗಸೂಚಿಯಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳುವುದು, ಆಗಾಗ್ಗೆ ಕೈಗಳನ್ನು ತೊಳೆಯುವುದು, ಮುಖವನ್ನು ಸ್ಪರ್ಶಿಸುವುದನ್ನು ತಪ್ಪಿಸುವುದು ಮತ್ತು ಹೆಚ್ಚು ಜನರಿರುವ ಸ್ಥಳಗಳಲ್ಲಿ ಮಾಸ್ಕ್ಗಳನ್ನು ಬಳಸುವುದು ಕಡ್ಡಾಯ ಎಂದು ಹೇಳಲಾಗಿದೆ.
ರಾಜಸ್ಥಾನದ ಆರೋಗ್ಯ ಇಲಾಖೆ ಹೊರಡಿಸಿದ ಸಲಹೆಯಲ್ಲಿ ಪರಿಸ್ಥಿತಿ “ಸದ್ಯ ಚಿಂತಿತವಾಗಿಲ್ಲ” ಆದರೆ ವೈದ್ಯಕೀಯ ಸಿಬ್ಬಂದಿ ಜಾಗರೂಕರಾಗಿರಿ ಮತ್ತು ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಬೇಕು. ಮಕ್ಕಳ ಘಟಕಗಳು ಮತ್ತು ಔಷಧ ವಿಭಾಗಗಳಲ್ಲಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಬೇಕು ಎಂದು ಹೇಳಲಾಗಿದೆ.
ಗುಜರಾತ್‌ನಲ್ಲಿ, ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಅವರು COVID-19 ಸಾಂಕ್ರಾಮಿಕ ಸಮಯದಲ್ಲಿ ರಚಿಸಲಾದ ಆರೋಗ್ಯ ಮೂಲಸೌಕರ್ಯವನ್ನು, ಚೀನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವನ್ನು ಬಲಪಡಿಸಲಾಗುತ್ತಿದೆ ಎಂದು ಹೇಳಿದರು.
ಮಾರ್ಗಸೂಚಿ ಪ್ರಕಟ
ಉತ್ತರಾಖಂಡ ಸರ್ಕಾರವು ಉಸಿರಾಟದ ಕಾಯಿಲೆಗಳ ಪ್ರಕರಣಗಳಿಗೆ ಕಣ್ಗಾವಲು ಹೆಚ್ಚಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಉತ್ತರಾಖಂಡದ ಮೂರು ಜಿಲ್ಲೆಗಳು ಚಮೋಲಿ, ಉತ್ತರಕಾಶಿ ಮತ್ತು ಪಿಥೋರಗಢ ಚೀನಾದೊಂದಿಗೆ ಗಡಿಯನ್ನು ಹಂಚಿಕೊಳ್ಳುತ್ತವೆ. ಆದ್ದರಿಂದ ಇಲ್ಲೂ ಕೂಡ ಕಟ್ಟುನಿಟ್ಟಿನ ಕ್ರಮ ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ಇನ್ನೂ ಯಾವುದೇ ಮಕ್ಕಳ ನ್ಯುಮೋನಿಯಾ ಪ್ರಕರಣಗಳು ವರದಿಯಾಗದಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಹೇಳಿಕೆ ತಿಳಿಸಿದೆ.
ಕೋವಿಡ್ ನಂತರ ಹೊಸ ಸಂಚಲನ ಸೃಷ್ಟಿಸಿದ ವೈರಸ್
ಉತ್ತರ ಚೀನಾದಲ್ಲಿ ಉಸಿರಾಟದ ಕಾಯಿಲೆಗಳ ಪ್ರಕರಣಗಳ ಉಲ್ಬಣವು, ವಿಶೇಷವಾಗಿ ಮಕ್ಕಳಲ್ಲಿ, ಕೋವಿಡ್ -19 ದೇಶದಲ್ಲಿ ಹೊರಹೊಮ್ಮಿದ ನಾಲ್ಕು ವರ್ಷಗಳ ನಂತರ ಕಳವಳವನ್ನು ಹುಟ್ಟುಹಾಕಿದೆ ಮತ್ತು ಜಗತ್ತನ್ನು ಬದಲಿಸಿದ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದೆ. ಆದಾಗ್ಯೂ, ಹೆಚ್ಚುತ್ತಿರುವ ಸೋಂಕುಗಳು ಈ ಹಿಂದೆ ಬಂದಿರುವ ವೈರಸ್‌ಗಳ ಮಿಶ್ರಣವಾಗಿದೆ.
ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕೆ ಕ್ರಮಗಳು ಏನು?
1.ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು.
2.ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು
3.ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು
4.ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ. ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು
5.ಫ್ಲೂ ಪೀಡಿತ ವ್ಯಕ್ತಿಗಳಿಂದ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು
6.ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿ.