janadhvani

Kannada Online News Paper

ಸೌದಿ: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವಿದೇಶಿಯರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ

ಏಷ್ಯನ್, ಆಫ್ರಿಕನ್, ಯುರೋಪಿಯನ್ ಮತ್ತು ಲ್ಯಾಟಿನ್ ಅಮೇರಿಕನ್ ದೇಶಗಳ ಜನರು ಇತ್ತೀಚೆಗೆ ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದಾರೆ.

ರಿಯಾದ್: ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯದ ಪ್ರಕಾರ, ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದಿಂದ ಈ ವರ್ಷ ಅರ್ಧ ಲಕ್ಷಕ್ಕಿಂತಲೂ ಹೆಚ್ಚು ವಿದೇಶಿಯರು ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದಾರೆ. ಏಷ್ಯನ್, ಆಫ್ರಿಕನ್, ಯುರೋಪಿಯನ್ ಮತ್ತು ಲ್ಯಾಟಿನ್ ಅಮೇರಿಕನ್ ದೇಶಗಳ ಜನರು ಇತ್ತೀಚೆಗೆ ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದಾರೆ. ಇಸ್ಲಾಂಗೆ ಮತಾಂತರಗೊಂಡವರಲ್ಲಿ ಪುರುಷರು ಮತ್ತು ಮಹಿಳೆಯರೂ ಸೇರಿದ್ದಾರೆ.

ಈ ವರ್ಷ ಸೌದಿ ಪೂರ್ವ ಪ್ರಾಂತ್ಯದಿಂದ 56,561 ವಿದೇಶಿಯರು ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದಾರೆ ಎಂದು ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಬಹಿರಂಗಪಡಿಸಿದೆ. ಪ್ರಾಂತ್ಯದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಮತ್ತು ದಅ್ ವಾ ಮಾರ್ಗದರ್ಶನ ಕೇಂದ್ರ ಮೂಲಕ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.

ಇಸ್ಲಾಂ ಧರ್ಮವನ್ನು ಸ್ವೀಕರಿಸಿದವರಲ್ಲಿ 41609 ಪುರುಷರು ಮತ್ತು 14952 ಮಹಿಳೆಯರು ಸೇರಿದ್ದಾರೆ. ಅವರು ವಿವಿಧ ಏಷ್ಯನ್, ಆಫ್ರಿಕನ್, ಯುರೋಪಿಯನ್ ಮತ್ತು ಲ್ಯಾಟಿನ್ ಅಮೇರಿಕನ್ ದೇಶಗಳಿಂದ ಬಂದವರು. ಅವರಲ್ಲಿ ಹೆಚ್ಚಿನವರು ಇಸ್ಲಾಂ ಬಗ್ಗೆ ಕಲಿಯುವ ಮೂಲಕ ಮತ್ತು ಧರ್ಮದ ಬಗ್ಗೆ ಆಸಕ್ತಿಯನ್ನು ತೋರಿ ಸ್ವಯಂಪ್ರೇರಿತರಾಗಿ ಮತಾಂತರಗೊಂಡಿದ್ದಾರೆ.

ಅಂತಹವರಿಗಾಗಿ ಉಪನ್ಯಾಸಗಳು, ಮಾರ್ಗದರ್ಶನ ಕಿರುಪುಸ್ತಕಗಳು, ಶೈಕ್ಷಣಿಕ ಅಧ್ಯಯನಗಳು, ಸೆಮಿನಾರ್‌ಗಳು, ಕಾರ್ಯಾಗಾರಗಳು ಮತ್ತು ಪ್ರಮುಖ ಐತಿಹಾಸಿಕ ಸ್ಥಳಗಳಿಗೆ ಭೇಟಿಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ಜಾಗತಿಕ ಮಟ್ಟದಲ್ಲಿ ಇಸ್ಲಾಂ ಬಗ್ಗೆ ಕಲಿಯುವ ಮತ್ತು ಇಸ್ಲಾಂ ಧರ್ಮವನ್ನು ಸ್ವೀಕರಿಸುವವರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ ಎಂದು ದಅ್ ವಾ ರಂಗದಲ್ಲಿರುವವರು ಹೇಳುತ್ತಾರೆ.

error: Content is protected !! Not allowed copy content from janadhvani.com