ಚಿಕ್ಕಮಗಳೂರು ನಗರದಲ್ಲಿ ಯುವ ವಕೀಲರ ಮೇಲೆ ಪೊಲೀಸರು ನಡೆಸಿರುವ ಹಲ್ಲೆಯು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇತರೆ ಪೊಲೀಸರು ತಲೆ ತಗ್ಗಿಸುವ ವಾತಾವರಣ ಕಂಡು ಬರುತ್ತಿದೆ ಎಂದು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್ (ಅಲ್ ಇಂಡಿಯಾ ಕೌನ್ಸಿಲ್ ಆಫ್ ಹ್ಯೂಮನ್ ರೈಟ್ಸ್) ಜಿಲ್ಲಾ ಅಧ್ಯಕ್ಷರಾದ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ತೀವ್ರವಾಗಿ ಖಂಡಿಸಿದ್ದಾರೆ.
ಕೇವಲ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ್ದ ಮಾತ್ರಕ್ಕೆ ಕಾನೂನು ಕ್ರಮ ಜರುಗಿಸುವುದು ಸೂಕ್ತ ಅಲ್ಲದೆ ಅಮಾಯಕ ಜನರನ್ನು ಮನಬಂದಂತೆ ಥಳಿಸುವುದು ಮಾನವ ಹಕ್ಕುಗಳ ಉಲ್ಲಂಘನೆ ಈ ರೀತಿ ಮುಂದೆ ಅಗಬಾರದಂತೆ ಸರ್ಕಾರದಿಂದ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ರಜ್ವಿ ರವರು ಒತ್ತಾಯಿಸಿದ್ದಾರೆ ಹಾಗು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಮೇಲೆ ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಪೊಲೀಸರಿಗೆ ಸಾರ್ವಜನಿಕರೊಂದಿಗೆ ಸಭ್ಯತೆಯಿಂದ ವರ್ತಿಸಲು ಮೇಲಾಧಿಕಾರಿಗಳು ಮಾರ್ಗದರ್ಶನ ನೀಡುವಂತೆ ಕೋರಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೊಲೀಸರ ವತಿಯಿಂದ ಅಮಾಯಕರಿಗೆ ಪದೇ ಪದೇ ಈ ರೀತಿಯ ಹಲ್ಲೆಗಳು ಅವಾಚ್ಯ ಶಬ್ಧಗಳಿಂದ ನಿಂದಿಸುವುದು ಅವಮಾನಿಸುವುದು ಇತ್ಯಾದಿ ಮರುಕಳಿಸದಂತೆ ಇಲಾಖೆಯ ಉನ್ನತ ಅಧಿಕಾರಿಗಳು ಕ್ರಮ ವಹಿಸಬೇಕಾಗಿದೆ ಜಿಲ್ಲೆಯಲ್ಲಿ ಮುಂದೆ ಮಾನವ ಹಕ್ಕುಗಳ ಉಲ್ಲಂಘನೆಯಾಗುವ ಘಟನೆಗಳು ಉದ್ಭವವಾದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ವತಿಯಿಂದ ಕಾನೂನು ಹೋರಾಟ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.