janadhvani

Kannada Online News Paper

ಅಕ್ಷಯ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ- ಕಾರ್ಮಿಕರ ಸಮಸ್ಯೆ ಬಗ್ಗೆ ಮನವಿ

ಬಂಟ್ವ‍ಾಳ: ಕಟ್ಟಡ ಕಾರ್ಮಿಕರ ಮಕ್ಕಳ ಮದುವೆಗೆ ಗೌರವ ಸಹಾಯಧನ ನೀಡುವುದು ವಿಳಂಬವಾಗಿರುವುದರ ಬಗ್ಗೆ ಅಕ್ಷಯ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಾದ ಕರೀಂ ಕದ್ಕಾರ್ ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರನ್ನು ಡಿ. 2 ರಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಆದಷ್ಟು ಬೇಗ ಇದಕ್ಕೆ ಸಂಬಂಧಪಟ್ಟ ಅಧಿಕಾರಿಯವರ ಗಮನಕ್ಕೆ ತಂದು ಫಲಾನುಭವಿಗಳಿಗೆ ಸಹಾಯಧನವನ್ನು ಮಂಜೂರು ಮಾಡುವಂತೆ ಮಾನ್ಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರ ಜೊತೆ ಮಾತುಕತೆ ನಡೆಸಲಾಯಿತು. ಕೂಡಲೇ ಅಧಿಕಾರಿಗಳೊಂದಿಗೆ ಫೋನ್ ನಲ್ಲಿ ಮಾತನಾಡಿದ ಸಚಿವರು, ಈ ಬಗ್ಗೆ ಚರ್ಚಿಸಿ ಆದಷ್ಟು ಬೇಗ ಮಂಜೂರು ಮಾಡುತ್ತೇವೆ ಎನ್ನುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ವಿಧಾನ ಸಭಾ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕರಾದ ಲೋಬೋ, ಕೆಪಿಸಿಸಿ ಕಾರ್ಯದರ್ಶಿ ಅಶ್ವಿನ್ ಕುಮಾರ್ ರೈ, ದಕ್ಷಿಣ
ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಅಲಿ, ಯುವ ನ್ಯಾಯವಾದಿ ಗಝಾಲ್ ಬಾರೆಬೆಟ್ಟು ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com