janadhvani

Kannada Online News Paper

ಉರಿಮಜಲಿನ ಅಬ್ದುಲ್ ಹಕೀಂ ರಿಯಾದಿನಲ್ಲಿ ನಿಧನ- ಅಂತ್ಯಕ್ರಿಯೆಗೆ ಕೆಸಿಎಫ್ ರಿಯಾದ್ ಸಹಕಾರ

ಉರಿಮಜಲು ನಿವಾಸಿ ಅಬ್ದುಲ್ ಹಕೀಂರವರು ಇತ್ತೀಚೆಗೆ ಹೃದಯಾಘಾತದಿಂದ ಸೌದಿ ಅರೇಬಿಯಾದ ರಿಯಾದಿನಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ರಿಯಾದ್ ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.

12/12/2023ರಂದು ಹೃದಯಾಘಾತದಿಂದ ಮರಣ ಹೊಂದಿದ ಮಾಹಿತಿ ಸಿಕ್ಕದ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .

ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ದಾಖಲೆಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ದಮ್ಮಾಮ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಭಾಷಾ ಗಂಗಾವಳಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ಕುಟುಂಬಸ್ಥರಾದ ಅಶ್ರಫ್ ಆತೂರು, ಮನ್ಸೂರ್, ಇಬ್ರಾಹಿಂ ಮೆಲ್ಕಾರ್ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ  ನಿಭಾಯಿಸಿದ್ದಾರೆ.

ರಿಯಾದಿನ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ನಡೆದ ಜನಾಝ ನಮಾಝ್ ಮತ್ತು ದಫನ ಕಾರ್ಯದಲ್ಲಿ ಕೆಸಿಎಫ್ ರಾಷ್ಟ್ರೀಯ ನಾಯಕರಾದ ಸಿದ್ದೀಕ್ ಸಖಾಫಿ ಪೆರುವಾಯಿ ಉಸ್ತಾದರ ನೇತೃತ್ವದಲ್ಲಿ ಶಿಹಾಬುದ್ದೀನ್ ಹಳೆಯಂಗಡಿ,‌ ಅಶ್ರಫ್ ಪಡುಬಿದ್ರೆ  ಸೇರಿದಂತೆ ಕೆಸಿಎಫ್ ರಾಷ್ಟ್ರೀಯ, ಝೋನ್ ನಾಯಕರು, ಕಾರ್ಯಕರ್ತರು,  ಕುಟುಂಬಸ್ಥರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಮೃತರು ತಂದೆ ತಾಯಿ ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

error: Content is protected !! Not allowed copy content from janadhvani.com