janadhvani

Kannada Online News Paper

ವೀಸಾ ಕಡ್ಡಾಯ ನೀತಿ ರದ್ದು- ಭಾರತೀಯರಿಗೆ ವೀಸಾ ರಹಿತ ಪ್ರಯಾಣಿಸಲು ಅವಕಾಶ

ಭಾರತವೂ ಸೇರಿದಂತೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಲು ಇರಾನ್ ಸರ್ಕಾರ ಬುಧವಾರ ನಿರ್ಧರಿಸಿದೆ

ಟೆಹರಾನ್: ಇನ್ನು ಮುಂದೆ ಇರಾನ್ ಗೆ ಪ್ರಯಾಣಿಸಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ. ಭಾರತ ಸೇರಿದಂತೆ 33 ರಾಷ್ಟ್ರಗಳಿಗೆ ವೀಸಾ ಕಡ್ಡಾಯ ನೀತಿಯನ್ನು ಇರಾನ್ ಸರ್ಕಾರ ಮನ್ನಾ ಮಾಡಿದೆ.

ಈ ಬಗ್ಗೆ ಸ್ವತಃ ಇರಾನ್‌ನ ಸಾಂಸ್ಕೃತಿಕ ಪರಂಪರೆ, ಪ್ರವಾಸೋದ್ಯಮ ಮತ್ತು ಕರಕುಶಲ ಸಚಿವ ಇಝ್ಝತುಲ್ಲಾಹ್ ಝರ್ಗಾಮಿ ಅವರು ಭಾರತದಿಂದ ಭೇಟಿ ನೀಡುವವರಿಗೆ ವೀಸಾ ಅವಶ್ಯಕತೆಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸಲು ಇರಾನ್ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಭಾರತವೂ ಸೇರಿದಂತೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಲು ಇರಾನ್ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅವರು ಹೇಳಿದರು.

ಬುಧವಾರ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಝರ್ಗಾಮಿ, ಪ್ರವಾಸೋದ್ಯಮ ಆಗಮನವನ್ನು ಹೆಚ್ಚಿಸುವ ಮತ್ತು ವಿಶ್ವದಾದ್ಯಂತದ ದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಗುರಿಯನ್ನು ಹೊಂದಲಾಗಿದ್ದು, ಇದೇ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳು ಇರಾನೋಫೋಬಿಯಾ ಅಭಿಯಾನಗಳನ್ನು ತಟಸ್ಥಗೊಳಿಸಬಹುದು ಎಂದು ಅವರು ಹೇಳಿದರು.

ಇರಾನ್‌ನ ಹೊಸ ವೀಸಾ-ಮನ್ನಾ ಕಾರ್ಯಕ್ರಮಕ್ಕೆ ಅನುಮೋದಿಸಿದ 33 ದೇಶಗಳ ಪಟ್ಟಿ ಇಂತಿದೆ:
ಭಾರತ, ರಷ್ಯಾ, ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಬಹ್ರೇನ್, ಸೌದಿ ಅರೇಬಿಯಾ, ಕತಾರ್, ಕುವೈತ್, ಲೆಬನಾನ್, ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಟುನೀಶಿಯಾ, ಮಾರಿಟಾನಿಯಾ, ತಾಂಜೇನಿಯಾ, ಜಿಂಬಾಬ್ವೆ, ಮಾರಿಷಸ್, ಸೀಶೆಲ್ಸ್, ಇಂಡೋನೇಷ್ಯಾ, ದರುಸ್ಸಲಾಮ್, ಜಪಾನ್, ಸಿಂಗಾಪುರ, ಕಾಂಬೋಡಿಯಾ, ಮಲೇಷ್ಯಾ , ಬ್ರೆಜಿಲ್, ಪೆರು, ಕ್ಯೂಬಾ, ಮೆಕ್ಸಿಕೋ, ವೆನೆಜುವೆಲಾ, ಬೋಸ್ನಿಯಾ ಮತ್ತು ಹರ್ಜೆಗೋವಿನಾ, ಸೆರ್ಬಿಯಾ, ಕ್ರೊಯೇಷಿಯಾ ಮತ್ತು ಬೆಲಾರಸ್.

ಇತ್ತೀಚೆಗೆ ಮಲೇಷ್ಯಾ, ಶ್ರೀಲಂಕಾ ಮತ್ತು ವಿಯೆಟ್ನಾಂ ಭಾರತದಿಂದ ಬರುವ ಸಂದರ್ಶಕರಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಿತ್ತು.

error: Content is protected !! Not allowed copy content from janadhvani.com