ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಸಮಿತಿ ಕಾಜೂರು ಅಧೀನದ ರಹ್ಮಾನಿಯಾ ಶಿಕ್ಷಣ ಸಂಸ್ಥೆ ಇದರ ರಹ್ಮಾನಿಯಾ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗುವುದು ಹೇಗೆ? ಎಂಬುವುದರ ಕುರಿತು ವಿಶೇಷ ಕಾರ್ಯಾಗಾರವು ಡಿ.22 ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ತರಬೇತುದಾರ, ಶಿವಮೊಗ್ಗ ತೀರ್ಥಹಳ್ಳಿ ಸರಕಾರಿ ಕಾಲೇಜಿನ ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಇಕ್ಬಾಲ್ ಮಾಚಾರ್ ರವರು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಕೆ ಎಂ ಸಿದ್ದೀಕ್ ಮೋಂಟುಗೋಳಿ ಸ್ವಾಗತಿಸಿ, ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ, ಸಂಸ್ಥೆಯ ಚೇರ್ಮೇನ್ ಹಾಗೂ ದರ್ಗಾ ಸಮಿತಿ ಪ್ರಧಾನ ಕಾರ್ಯದರ್ಶಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್, ಸಂಸ್ಥೆ ಕೋಶಾಧಿಕಾರಿ ಮುಹಮ್ಮದ್ ಕಮಾಲ್, ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಮುಖ್ಯೋಪಾಧ್ಯಾಯಿನಿ ಸಂಶಾದ್ ಸಹಿತವಿರುವ ಶಿಕ್ಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಸ್ವಾದಿಕ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್