janadhvani

Kannada Online News Paper

ಮುಸ್ಲಿಮ್ ಮಹಿಳೆಯರ ವಿರುದ್ಧ ಕಲ್ಲಡ್ಕ ಭಟ್ ಹೇಳಿಕೆ ಕೋಮು ಪ್ರಚೋದಿತ,ಪ್ರಕರಣ ದಾಖಲಾಗಲಿ- ಮುಸ್ಲಿಮ್ ಒಕ್ಕೂಟ

ರಾಜ್ಯದಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಸರ್ಕಾರ ಮತ್ತು ಪೊಲೀಸರೇ ಹೊಣೆ

ಮೈಸೂರಿನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮುಸ್ಲಿಮ್ ಮಹಿಳೆಯರನ್ನು ಉದ್ದೇಶಿಸಿ ನೀಡಿದ ಹೇಳಿಕೆ ಕೋಮು ಪ್ರಚೋದನಕಾರಿ ಆಗಿದೆ. ಭಟ್ ಆ ಮೂಲಕ ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿ , ಮತೀಯ ಉದ್ವಿಗ್ನತೆ ಸೃಷ್ಟಿಸುವ ಮತ್ತು ಮತೀಯ ಗಲಭೆಗಳನ್ನು ಹುಟ್ಟು ಹಾಕುವ ರೀತಿಯ ಹೇಳಿಕೆ ನೀಡಿರುತ್ತಾರೆ ಎಂದು ಕರ್ನಾಟಕ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು,ಸರಕಾರ ಮತ್ತು ಜಿಲ್ಲಾಡಳಿತ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಪ್ರಕರಣ ದಾಖಲು ಗೊಳಿಸಬೇಕು. ರಾಜ್ಯದಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಸರ್ಕಾರ ಮತ್ತು ಪೊಲೀಸರೇ ಹೊಣೆ. ಕಲ್ಲಡ್ಕ ಭಟ್ಟರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸು ಸ್ಟೇಶನ್ ನಲ್ಲಿ ಈ ಬಗ್ಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದರು.

ನಿಯೋಗದಲ್ಲಿ ಅಬ್ದುಲ್ ಜಲೀಲ್,ಅಶ್ರಫ್ ಬದ್ರಿಯಾ, ಸಾಲಿಹ್ ಬಜ್ಪೆ, ಹಿದಾಯತ್ ಮಾರಿಪಲ್ಲ,ಹಿದಾಯತ್ ಕೃಷ್ಣಾಪುರ,ಮೊಹಮ್ಮದ್ ಹನೀಫ್.ಯು, ವಿ.ಏಚ್. ಕರೀಮ್, ಸೋಶಿಯಲ್ ಫಾರೂಕ್ ಮತ್ತಿತರು ಉಪಸ್ಥಿತರಿದ್ದರು.