janadhvani

Kannada Online News Paper

‘ಭಟ್ ಬಂಧನ ಯಾಕಿಲ್ಲ?’ – ನಾಳೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮುಖ್ಯಮಂತ್ರಿಗಳೇ.. ಕಲ್ಲಡ್ಕ ಪ್ರಭಾಕರ ಭಟ್ ಗೆ ಈ ನೆಲದ ಯಾವ ಕಾನೂನೂ ಅನ್ವಯಿಸುವುದಿಲ್ಲವೇ?

ಸಾರ್ವಜನಿಕರ ಗಮನಕ್ಕೆ- ಇಂದಿನ ಪ್ರತಿಭಟನೆ ಮುಂದೂಡಲಾಗಿದೆ

ಮಂಗಳೂರು: ಕೊಳಕು ನಾಲಗೆಯಿಂದ, ಹೊಲಸು ನುಡಿಗಳನ್ನು ಹರಿಯಬಿಟ್ಟು ರಾಜ್ಯದ ಶಾಂತಿಯುತ ವಾತಾವರಣವನ್ನು ಕೆಡಿಸುತ್ತಿರುವ ಕಲ್ಲಡ್ಕ ಪ್ರಭಾಕರ ಭಟ್ ರನ್ನು ಬಂಧಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದರ ವಿರುದ್ಧ ನಾಳೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

“ಮುಖ್ಯಮಂತ್ರಿಗಳೇ.. ಕಲ್ಲಡ್ಕ ಪ್ರಭಾಕರ ಭಟ್ ಗೆ ಈ ನೆಲದ ಯಾವ ಕಾನೂನೂ ಅನ್ವಯಿಸುವುದಿಲ್ಲವೇ?” ಎಂಬ ಸಂದೇಹವನ್ನು ಮುಂದಿಟ್ಟು ರಾಜ್ಯದಲ್ಲಿ ನೆಮ್ಮದಿಯ ವಾತಾವರಣ ಸೃಷ್ಟಿಗಾಗಿ ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಯುವಜನ ಸಂಘ, ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಸಂಘಟನೆಗಳ ನೇತೃತ್ವದಲ್ಲಿ ಡಿ.29 ರಂದು ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಅಪರಾಹ್ನ 3 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕ‌ರ್ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ರವಿವಾರ ಮಂಡ್ಯದಲ್ಲಿ ನೀಡಿರುವ ಅತ್ಯಂತ ಅವಹೇಳನಕಾರಿ ಹೇಳಿಕೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರಾಜ್ಯದ ಹಲವು ಪೊಲೀಸ್‌ ಠಾಣೆಗಳಲ್ಲಿ ಜಾಮೀನು ರಹಿತ ಸೆಕ್ಷನ್ ಗಳಡಿಯಲ್ಲಿ ಪ್ರಕರಣಗಳು ಕೂಡ ದಾಖಲಾಗಿದೆ.ಆದರೆ, ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿರುವುದು ರಾಜ್ಯದ ಜನತೆಯ ಆತಂಕಕ್ಕೆ ಕಾರಣವಾಗಿದೆ.

ಪ್ರಭಾಕರ ಭಟ್, ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಧರ್ಮಗಳ ನಡುವೆ ಗಲಭೆ, ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಅಣಕಿಸಿದ್ದಾರೆ. ಪ್ರಭಾಕರ ಭಟ್ ವಿರುದ್ಧ ರೌಡಿಶೀಟ್ ತೆರೆಯಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗಿದೆ.

ಕಳೆದ ರವಿವಾರ ಮಂಡ್ಯದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, “ಹಿಂದೆ ತಲಾಕ್ ತಲಾಕ್ ಎಂದು ಹೇಳಿ ತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ” ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದು, ಇನ್ನೂ ಅನೇಕ ಪ್ರಚೋದನಕಾರಿ ಮಾತುಗಳನ್ನು ಅದೇ ಭಾಷಣದಲ್ಲಿ ಪ್ರಭಾಕರ್ ಭಟ್ ಹೇಳಿದ್ದ. ಈ ಬಗ್ಗೆ ರಾಜ್ಯಾದ್ಯಂತ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

error: Content is protected !! Not allowed copy content from janadhvani.com