ತಾಜುಲ್ ಉಲಮಾ ಸುನ್ನೀ ಸೆಂಟರ್ ಎನ್,ಸಿ ರೋಡ್ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ತಾಜುಲ್ ಉಲಮಾ,ಕಣ್ಣಿಯತ್ ಉಸ್ತಾದ್,ಶಂಸುಲ್ ಉಲಮಾ,ನೂರುಲ್ ಉಲಮಾ,ಸುರಿಬೈಲ್ ಉಸ್ತಾದ್, ಪಿ,ಎ ಉಸ್ತಾದ್, ಎ,ಪಿ ಮುಹಮ್ಮದ್ ಮುಸ್ಲಿಯಾರ್ ಕಾಂತಪುರಂ ಮತ್ತು ಅಗಗಲಿದ ಸಮಸ್ತ ನೇತಾರರ ಅನುಸ್ಮರಣಾ ಸಮ್ಮೇಳನ ಮತ್ತು ತಾಜುಲ್ ಉಲಮಾ ಸುನ್ನೀ ಸೆಂಟರ್ ಇದರ 10ನೇ ವಾರ್ಷಿಕ ಸಮ್ಮೇಳನ ಬೋಳಂತೂರು ಗ್ರಾಮದ ಎನ್,ಸಿ ರೋಡಲ್ಲಿ ಮುಂದಿನ ಜ.4 ರ ಗುರುವಾರದಂದು ಎನ್,ಸಿ ರೋಡಲ್ಲಿ ಬಹು|ಶೈಖುನಾ ಮಂಚಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಜೆ ಮಗ್ರಿಬ್ ನಮಾಝ್ ಬಳಿಕ ಅಸ್ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್ ರವರ ನೇತೃತ್ವದಲ್ಲಿ, ನೂರುಲ್ ಹುದಾ ದರ್ಸ್ ವಿಧ್ಯಾರ್ಥಿಗಳು ಒಕ್ಕೆತ್ತೂರು ಇವರ ಆಲಾಪಣೆಯೊಂದಿಗೆ ತಾಜುಲ್ ಉಲಮಾ ಮೌಲಿದ್ ಕಾರ್ಯಕ್ರಮ ನಡೆಯಲಿದೆ.
ರಾತ್ರಿ 8:30ಕ್ಕೆ ಅಸ್ಸಯ್ಯಿದ್ ನೂರುಸ್ಸಾದಾತ್ ಬಾಯಾರ್ ತಂಙಳ್ ರವರ ದುಆ ಆಶೀರ್ವಚನದೊಂದಿಗೆ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಅನುಸ್ಮರಣಾ ಕಾರ್ಯಕ್ರಮವನ್ನು ಉಧ್ಘಾಟಿಸಲಿದ್ದು,ದಾರುಲ್ ಅಶ್-ಅರಿಯ್ಯ ಸಂಸ್ಥೆಯ ಮ್ಯಾನೆಜರ್ ಮಹಮ್ಮದ್ ಅಲಿ ಸಖಾಫಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದು, ಪೇರೋಡು ಮುಹಮ್ಮದ್ ಅಝ್ಹರಿ ಮುಖ್ಯ ಭಾಷಣ ಮಾಡಲಿದ್ದಾರೆ.
ಅಲ್ಲದೆ ಕಾರ್ಯಕ್ರಮದಲ್ಲಿ ಇನ್ನಿತರ ಉಲಮಾ ಉಮರಾಗಳು ಭಾಗವಹಿಸಲಿದ್ದಾರೆ,ಈ ಕಾರ್ಯಕ್ರಮಕ್ಕೆ ಸರ್ವರನ್ನೂ ಪ್ರೀತಿ ಪೂರ್ವಕ ಸ್ವಾಗತಿಸುವ S M A ಜಿಲ್ಲಾ ಸದಸ್ಯರಾದ ರಫೀಕ್ ಮಾಡದ ಬಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್