ದೋಹಾ: ಕತಾರ್ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರಿಗೆ ಭಾರಿ ದಂಡ ಕಾದಿದೆ. 10,000 ರಿಯಾಲ್ಗಳವರೆಗೆ ದಂಡವನ್ನು ವಿಧಿಸಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ವಾಹನಗಳನ್ನು ಬಿಟ್ಟು ಹೋಗುವವರಿಗೆ 25,000 ರಿಯಾಲ್ಗಳವರೆಗೆ ದಂಡ ವಿಧಿಸಲಾಗುವುದು ಎಂದು ಪೌರಾಡಳಿತ ಸಚಿವಾಲಯ ಎಚ್ಚರಿಸಿದೆ.
ವಾಹನವನ್ನು ಸಾರ್ವಜನಿಕ ಸ್ಥಳಗಳಲ್ಲಿ, ಬೀದಿಗಳಲ್ಲಿ ಅಥವಾ ಪಾರ್ಕಿಂಗ್ ಸ್ಥಳಗಳಲ್ಲಿ ಬಿಟ್ಟರೆ ಭಾರೀ ದಂಡವು ಕಾದಿದೆ.ಸಾರ್ವಜನಿಕ ನೈರ್ಮಲ್ಯ ಕಾಯ್ದೆಯ ಭಾಗವಾಗಿ ದಂಡವು 25,000 ಕತಾರ್ ರಿಯಾಲ್ಗಳು ಅಥವಾ ಐದೂವರೆ ಲಕ್ಷ ರೂಪಾಯಿಗಳಿಗಿಂತ ಹೆಚ್ಚು. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಸಮಯ ವಾಹನಗಳನ್ನು ಬಿಟ್ಟು ಹೋಗದಂತೆ ಎಚ್ಚರಿಕೆ ಅಗತ್ಯ.
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದರಿಂದಲೂ ಕಿಸೆ ಖಾಲಿಯಾಗಲಿದೆ. ದಂಡ 10,000 ರಿಯಾಲ್. ರಸ್ತೆ, ಬೀದಿಗಳಲ್ಲಿ ಕಸ ಹಾಕುವುದಕ್ಕೂ ಇದೇ ಶಿಕ್ಷೆಯಾಗಿದೆ. ಇದರೊಂದಿಗೆ, ಕುಸಿದ ಗೋಡೆಗಳು ಮತ್ತು ಕಟ್ಟಡಗಳಿಗೆ ಭಾರಿ ದಂಡವನ್ನು ವಿಧಿಸಲಾಗುವುದು ಎಂದು ಸಚಿವಾಲಯವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಎಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು