janadhvani

Kannada Online News Paper

ಉಗ್ರ ಭಾಷಣಕಾರ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

"ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿದ್ದಾನೆ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ 21 ರ ಆದೇಶದಲ್ಲಿ ಹೇಳಿದೆ. ಹಾಗಾಗಿ ಇದು ದೇಶದ್ರೋಹದ ಕೃತ್ಯ" ಎಂದು ಪ್ರಾಥಮಿಕ ವಾದ ಮಂಡಿಸಿದರು.

ಬೆಂಗಳೂರು :ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಉಗ್ರ ಭಾಷಣಕಾರ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಭಟ್ ಪರವಾಗಿ ಹಿರಿಯ ವಕೀಲರು ಹಾಜರಾಗದೇ ಇದ್ದಿದ್ದರಿಂದ ಅವರ ಕಿರಿಯ ವಕೀಲರು ಸಮಯ ಕೇಳಿದರು. “ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ದವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು.

“ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ ಮಧ್ಯಂತರ ಜಾಮೀನು ತಕ್ಷಣ ರದ್ದು ಮಾಡಬೇಕು. ದೇಶಕ್ಕಿಂತ ಮಿಗಿಲು ಯಾರೂ ಇಲ್ಲ. ಸುಪ್ರಿಂ ಕೋರ್ಟ್ ದ್ವೇಷ ಭಾಷಣದ ಬಗ್ಗೆ ಆದೇಶ ನೀಡಿದ್ದು ಮಾತ್ರವಲ್ಲ, ತೀಕ್ಷ್ಮವಾದ ಸೂಚನೆಗಳನ್ನು ಎಲ್ಲಾ ರಾಜ್ಯಗಳಿಗೆ ನೀಡಿದೆ” ಎಂದು ಬಾಲನ್ ವಾದ ಮಂಡಿಸಿದರು.

“ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿದ್ದಾನೆ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ 21 ರ ಆದೇಶದಲ್ಲಿ ಹೇಳಿದೆ. ಹಾಗಾಗಿ ಇದು ದೇಶದ್ರೋಹದ ಕೃತ್ಯ” ಎಂದು ಪ್ರಾಥಮಿಕ ವಾದ ಮಂಡಿಸಿದರು.

ವಿಚಾರಣೆಯನ್ನು ಜನವರಿ 10 ಕ್ಕೆ ಮುಂದೂಡಿದ್ದು, ಅಂದು ಸಂಜೆ 4 ಗಂಟೆಗೆ ವಿಸ್ತೃತ ವಾದ ನಡೆಯಲಿದೆ‌ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, “ಹಿಂದೆ ತಲಾಕ್ ತಲಾಕ್ ಎಂದು ಹೇಳಿ ತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ” ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದರು.

error: Content is protected !! Not allowed copy content from janadhvani.com