ಅಹಮದಾಬಾದ್: ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ ಅವರಿಗೆ ಅದ್ಧೂರಿ ಸ್ವಾಗತ ದೊರೆಯಿತು.
ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯಲ್ಲಿ ಭಾಗವಹಿಸಲು ಆಗಮಿಸಿರುವ ಯುಎಇ ಅಧ್ಯಕ್ಷರನ್ನು ಮಂಗಳವಾರ ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಬರಮಾಡಿಕೊಂಡರು.
ಉಭಯ ನಾಯಕರು ವಿಮಾನ ನಿಲ್ದಾಣದಿಂದ ಮೂರು ಕಿಲೋಮೀಟರ್ ರೋಡ್ ಶೋ ನಡೆಸಿದರು. ಈ ಮಾರ್ಗದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಗಳನ್ನು ಸಿದ್ಧಪಡಿಸಲಾಗಿತ್ತು.
ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯು ವ್ಯಾಪಾರ ಸಹಯೋಗ, ಜ್ಞಾನ ಹಂಚಿಕೆ ಮತ್ತು ಅಂತರ್ಗತ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ಕಾರ್ಯತಂತ್ರದ ಪಾಲುದಾರಿಕೆಗಾಗಿ ಜಾಗತಿಕ ವೇದಿಕೆಯಾಗಿದೆ ಎಂದು ಪಿಎಂಒ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.