janadhvani

Kannada Online News Paper

ಮುಖ್ಯಮಂತ್ರಿಯನ್ನು ಕೆಟ್ಟ ಪದಗಳಲ್ಲಿ ನಿಂದಿಸಿ ವಿಡಿಯೋ ಹರಿಬಿಟ್ಟದ್ದ ಆರೋಪಿ ಬಂಧನ

ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿತ್ತಿರೋ ಆರೋಪಿ ಅನಿಲ್ ಕುಮಾರ್, ಕೆಟ್ಟ ಪದಗಳಲ್ಲಿ ನಿಂದಿಸಿ ವಿಡಿಯೋ ಹರಿಬಿಟ್ಟದ್ದ.

ಮಂಗಳೂರು, ಜ.17: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಏಕವಚನದಲ್ಲಿ ನಿಂದಿಸಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪಿಯನ್ನು ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಮೂಲದ ಅನಿಲ್ ಕುಮಾರ್ ಬಂಧಿತ ಆರೋಪಿ. ಈತ 12 ವರ್ಷದಿಂದ ಸುರತ್ಕಲ್ ನಲ್ಲಿ ವಾಸವಾಗಿದ್ದಾನೆ.

ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿತ್ತಿರೋ ಆರೋಪಿ ಅನಿಲ್ ಕುಮಾರ್, ಕೆಟ್ಟ ಪದಗಳಲ್ಲಿ ನಿಂದಿಸಿ ವಿಡಿಯೋ ಹರಿಬಿಟ್ಟದ್ದ. ಈ ಘಟನೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದರು. ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಎನ್ಎಸ್ಯುಐ ದೂರು ಸ್ವೀಕರಿಸಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ CR.6/24, U/S 153A, 505(I)(C) IPC ಸಕ್ಷನ್ 504 ಅಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಪಡಿತರ ಚೀಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಮತ್ತು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದ ಹಿನ್ನೆಲೆ ಕೋಪಗೊಂಡ ಯುವಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ದ ಅಶ್ಲೀಲವಾಗಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಿದ್ದ. ಹೀಗಾಗಿ ಈ ಸಂಬಂಧ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದರು. ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !! Not allowed copy content from janadhvani.com