ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಕ್ಕಳ ಅಪಹರಣಕಾರರ ಬಗೆಗಿನ ವದಂತಿಗಳಿಂದಾಗಿ ಜನರಲ್ಲಿ ಮೂಡಿರುವ ಆತಂಕವನ್ನು ದೂರಮಾಡಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ಕೆಲವು ಅಪರಿಚಿತರನ್ನು ಮಕ್ಕಳ ಅಪಹರಣಕಾರರೆಂದು ಭಾವಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಗಳು ವರದಿಯಾಗಿದ್ದು, ಬೇರೆ ಕಡೆಗಳಲ್ಲೂ ಇಂಥ ಘಟನೆಗಳು ಮರುಕಳಿಸುವ ಸಾಧ್ಯತೆಯಿದೆ. ತಕ್ಷಣ ಈ ಬಗ್ಗೆ ಜಾಗೃತಿ ಮೂಡಿಸಿ ಎಂದು ಕುಮಾರಸ್ವಾಮಿ ಅಧಿಕಾರಿಗಳಿಗೆ ಹೇಳಿದ್ದಾರೆ.
ನಿಫಾ ವೈರಸ್:ಕೇರಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ರಾಜ್ಯದಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.