janadhvani

Kannada Online News Paper

ಸಾಲ ಮನ್ನಾ: ಬಂದ್‌ಗೆ ನಾನು ಕರೆ ನೀಡಿಲ್ಲ-ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ‘ರೈತರ ಸಾಲ ಮನ್ನಾ ಮಾಡುವುದಾಗಿ ಶುಕ್ರವಾರ (ಮೇ 25) ಸಂಜೆಯೊಳಗೆ ಘೋಷಿಸದಿದ್ದರೆ ಸೋಮವಾರ ಕರ್ನಾಟಕ ಬಂದ್‌ ನಡೆಸುತ್ತೇವೆ’ ಎಂದು ಹೇಳಿದ್ದ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ‘ಬಂದ್‌ಗೆ ನಾನು ಕರೆ ನೀಡಿಲ್ಲ’ ಎಂದು ಶನಿವಾರ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಾಲ ಮನ್ನಾ ಮಾಡದೇ ಇದ್ದರೆ ರೈತರು ಸ್ವಯಂ ಪ್ರೇರಿತರಾಗಿ ಬಂದ್ ನಡೆಸುತ್ತಾರೆ ಎಂದು ಹೇಳಿದ್ದೆ. ಬಂದ್‌ಗೆ ಬಿಜೆಪಿ ಕರೆ ನೀಡುವುದಿಲ್ಲ’ ಎಂದರು.

‘ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಎಲ್ಲ ಸಾಲಗಳನ್ನು ಮನ್ನಾ ಮಾಡುವುದಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು.ಪೂರ್ಣ ಬಹುಮತದ ಮೇಲೆ ಅಧಿಕಾರ ನೀಡಿದರೆ ಮನ್ನಾ ಮಾಡುವುದಾಗಿ ಹೇಳಿದ್ದೆ. ಸಮ್ಮಿಶ್ರ ಸರ್ಕಾರ ಆಗಿರುವುದರಿಂದಾಗಿ ಈಗ ಆಲೋಚನೆ ಮಾಡಬೇಕು ಎಂದು ಅಧಿಕಾರ ಹಿಡಿದ ಮೇಲೆ ಯೂಟರ್ನ್ ಹೊಡೆದಿದ್ದಾರೆ. ಇದರಿಂದ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಾರೆ’ ಎಂದು ಹೇಳಿದ್ದೆ ಎಂದು ತಿಳಿಸಿದರು.