janadhvani

Kannada Online News Paper

ಕುವೈತ್: ಅಯೋಧ್ಯೆ ಪ್ರಾಣ ಪ್ರತಿಷ್ಠಾ ದಿನದಂದು ಸಂಭ್ರಮ- 9 ಮಂದಿ ಭಾರತೀಯರ ವಜಾ

ಪ್ರಾಣ ಪ್ರತಿಷ್ಠಾ ದಿನದಂದು ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ ಕೆಲಸದ ಸ್ಥಳದಲ್ಲಿ ಸಿಹಿ ಹಂಚಿದ್ದರು.

ಕುವೈಟ್ ಸಿಟಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿರುವ ಭೂಮಿಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾ ದಿನದಂದು ಕುವೈತ್‌ನಲ್ಲಿ ಸಂಭ್ರಮಿಸಿದ ಭಾರತೀಯರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಒಂಬತ್ತು ಭಾರತೀಯರನ್ನು ಎರಡು ಕಂಪನಿಗಳು ವಜಾ ಮಾಡಿ ಭಾರತಕ್ಕೆ ವಾಪಸ್ ಕಳುಹಿಸಿದೆ. ಪ್ರಾಣ ಪ್ರತಿಷ್ಠಾ ದಿನದಂದು ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ ಕೆಲಸದ ಸ್ಥಳದಲ್ಲಿ ಸಿಹಿ ಹಂಚಿದ್ದರು. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಈ ಕಾರ್ಯಕ್ರಮದ ನೇತೃತ್ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವಹಿಸಿದ್ದರು.ಆರ್‌ಎಸ್‌ಎಸ್ ಅಧ್ಯಕ್ಷ ಮೋಹನ್ ಭಾಗವತ್, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಮ ಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯಗೋಪಾಲ್ ದಾಸ್, ಕಾಶಿ ಪ್ರಧಾನ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

error: Content is protected !! Not allowed copy content from janadhvani.com