janadhvani

Kannada Online News Paper

ಬಾಗಲಕೋಟೆ : ಭೀಕರ ರಸ್ತೆ ಅಪಘಾತದದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಸಾವನ್ನಪ್ಪಿದ್ದಾರೆ.
ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರು ನಿಧನರಾಗಿದ್ದಾರೆ. ತುಳಸಿಗೇರಿ ಬಳಿಯಲ್ಲಿ ಕಾರು ಪಲ್ಟಿಯಾಗಿ ಟೈರ್ ಬ್ಲಾಸ್ಟ್ ಆಗಿದ್ದು ಈ ವೇಳೆ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಈಗಾಗಲೇ ಪೊಲೀಸ್ ಭದ್ರತೆಯಲ್ಲಿ ಶವ ಪರೀಕ್ಷೆ ನಡೆದಿದೆ. ಆಸ್ಪತ್ರೆ ಬಳಿ ಶಾಸಕರ ಕಾರ್ಯಕರ್ತರು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. 70 ವರ್ಷದ ಸಿದ್ದು ನ್ಯಾಮಗೌಡ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡುವ ಮೂಲಕ ಶಾಸಕ ಸಿದ್ದು ನ್ಯಾಮಗೌಡರವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಮೈಸೂರಿನ ಬನ್ನಿಮಂಟಪ ಡಿಪೋ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಾಪ್ ಸಿಂಹ ಮಾಧ್ಯಮಗಳೊಂದಿಗೆ ಮಾತನಾಡಿ ಸಿದ್ದು‌ ನ್ಯಾಮಗೌಡ ಅವರು ಹಿರಿಯ ರಾಜಕಾರಣಿಯಾಗಿದ್ದರು. ಅವರ ಅನಿರೀಕ್ಷಿತ ಸಾವು ರಾಜ್ಯದ ಜನರಿಗೆ ಆಘಾತ ತಂದಿದೆ‌ ಎಂದಿದ್ದಾರೆ.

error: Content is protected !! Not allowed copy content from janadhvani.com