ರಿಯಾದ್: ಇಂದು (ಮಾ.10-2024) ರಂಜಾನ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ, ಹಿಜರಿ 1445, ರಂಜಾನ್‌ನ ಮೊದಲ ದಿನವು ಮಾರ್ಚ್ 11, ಸೋಮವಾರ ಆಗಿರುತ್ತದೆ ಎಂದು ಸೌದಿ ಅರೇಬಿಯಾದ ಚಂದ್ರ ವೀಕ್ಷಣಾ ಸಮಿತಿ ಆದಿತ್ಯವಾರ ಸಂಜೆ ಘೋಷಿಸಿದೆ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ರಂಜಾನ್ ತಿಂಗಳ ಆರಂಭವನ್ನು ಶಅಬಾನ್ನ 29 ನೇ ದಿನದಂದು ರಾತ್ರಿ ಚಂದ್ರ ದರ್ಶನದ ಆಧಾರದಲ್ಲಿ ನಿರ್ಣಯಿಸಲಾಗುತ್ತದೆ.
ಮಾ.11 ರಂದು ರಂಜಾನ್ ಮೊದಲ ದಿನವಾಗಲಿದ್ದು,ಈ ತಿಂಗಳನ್ನು ಮುಸ್ಲಿಮ್ ಸಮಾಜವು ಬಹಳ ಗೌರವ ಮತ್ತು ಭಕ್ತಿಯಿಂದ ಕಾಣುತ್ತದೆ. ಈ ತಿಂಗಳ ಹಗಲಿನಲ್ಲಿ ಕಡ್ಡಾಯ ವೃತವನ್ನು ಹಿಡಿದು ಹೆಚ್ಚೆಚ್ಚು ಪುಣ್ಯ ಕರ್ಮಗಳಲ್ಲಿ ತಮ್ಮನ್ನು ತೊಡಗಿಸುತ್ತಾರೆ. ರಾತ್ರಿಯಲ್ಲಿ ರಂಜಾನ್‌ನ ಪ್ರತ್ಯೇಕ ಪ್ರಾರ್ಥನೆಯಾದ ತರಾವೀಹ್ ನಲ್ಲೂ ಇತರ ಪ್ರಾರ್ಥನೆಗಳಲ್ಲೂ ಭಾಗಿಯಾಗುತ್ತಾರೆ.
ಇಸ್ಲಾಮ್ ಎಂಬ ಶಾಂತಿಯ ಸಂಕೇತವಾಗಿರುವ ಧರ್ಮದ ಅನುಯಾಯಿಗಳಾದ ಮುಸಲ್ಮಾನರು ಸದಾ ಶಾಂತಿಯನ್ನೇ ಬಯಸುವವರೂ, ಯಾವುದೇ ಜಾತಿ ಧರ್ಮವನ್ನು ನೋಡದೇ, ಇತರರೊಂದಿಗೆ ದಯೆಯನ್ನು ತೋರುವವರೂ, ಸಹಾಯ ಹಸ್ತವನನ್ನು ಚಾಚುವವರೂ ಆಗಿರುತ್ತಾರೆ.ಅದು ಅಲ್ಲಾಹನ ಮತ್ತು ಪ್ರವಾದಿ ಪೈಗಂಬರರ ಸಂದೇಶವಾಗಿರುತ್ತದೆ. ರಂಜಾನ್ ತಿಂಗಳಿನಲ್ಲಿ ನಡೆಸುವ ಪ್ರತಿಯೊಂದು ಪುಣ್ಯ ಕಾರ್ಯಗಳಿಗೆ 70 ಪಟ್ಪು ಹೆಚ್ಚು ಪ್ರತಿಫಲ ದೊರೆಯುತ್ತಿದೆ.
ರಂಜಾನ್ ಸಾಮಾನ್ಯವಾಗಿ 29 ಅಥವಾ 30 ದಿನಗಳಿರಲಿದೆ. ರಂಜಾನ್‌ನ 29 ನೇ ದಿನ ಶವ್ವಾಲ್ ತಿಂಗಳ ಚಂದ್ರ ದರ್ಶನವು ಇದರ ಅವಧಿಯನ್ನು ನಿರ್ಧರಿಸುತ್ತದೆ.ಅಂದು ಚಂದ್ರ ದರ್ಶನವಾದಲ್ಲಿ ಮರುದಿನ ಈದುಲ್ ಫಿತರ್ ಆಚರಿಸಲಾಗುತ್ತದೆ. ಶವ್ವಾಲ್ ತಿಂಗಳ ಚಂದ್ರ ದರ್ಶನವಾಗದಿದ್ದಲ್ಲಿ ರಂಜಾನ್ 30 ದಿನ ಪೂರ್ತೀಕರಿಸಿ ಮರುದಿನ ಈದ್ ಆಚರಿಸಲಾಗುತ್ತದೆ.
ಗಲ್ಫ್ ದೇಶಗಳಾದ ಯುಎಇ, ಬಹ್ರೇನ್, ಕುವೈತ್, ಖತಾರ್ ನಲ್ಲೂ ಮಾ.11 ರಂದು ರಂಜಾನ್ ಆರಂಭವಾಗಲಿದೆ.ಒಮಾನ್ ನಲ್ಲಿ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ಶಅಬಾನ್ 30 ಪೂರ್ತೀಕರಿಸಿ, ಮಾ.12 ಮಂಗಳವಾರ ರಂಜಾನ್ ಮೊದಲನೆ ದಿನವಾಗಿ ಘೋಷಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ