janadhvani

Kannada Online News Paper

CAA ಪೌರತ್ವ ಕಾನೂನು ವಿರೋಧಿಸಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಪ್ರತಿಭಟನೆ

ಬೆಳ್ತಂಗಡಿ (ಮಾ-13): ಕೇಂದ್ರ ಸರಕಾರ ಅಸಾಂವಿಧಾನಿಕ CAA ಜಾರಿ ಮಾಡಿದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಮಿನಿ ವಿಧಾನಸಭಾ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

CAA ಎಂಬುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, CAA ಕಾಯಿದೆಯನ್ನು ಕೇಂದ್ರ ಸರಕಾರ ವಾಪಸು ಪಡೆಯದೆ ಇದ್ದರೆ ಮುಂದಿನ ದಿನಗಳಲ್ಲಿ ದೇಶದ ಮೂಲೆ ಮೂಲೆಗಳಲ್ಲಿ ಉಗ್ರ ಹೋರಾಟವನ್ನು ಎಸ್‌ಡಿಪಿಐ ಮಾಡಲಿದೆ ತಾವೆಲ್ಲರೂ ಎಲ್ಲಾ ರೀತಿಯ ಹೋರಾಟಕ್ಕೆ ಸಜ್ಜಾಗಬೇಕು ಎಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ದಕ್ಷಿಣ ಕನ್ನಡ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿಗಾಳದ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಕ್ಷೇತ್ರ ವ್ಯಾಪ್ತಿಯ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು. ಕುವೆಟ್ಟು ಬ್ಲಾಕ್ ಅಧ್ಯಕ್ಷರಾದ ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ, ಅಶ್ಫಾಕ್ ಪುಂಜಾಲಕಟ್ಟೆ ಧನ್ಯವಾದಗೈದರು.

error: Content is protected !! Not allowed copy content from janadhvani.com