janadhvani

Kannada Online News Paper

SDPI ಕಾರ್ಯದರ್ಶಿ ಮಂಡಳಿ ಸಭೆ – ಚುನಾವಣೆ ವೀಕ್ಷಕರ ಆಯ್ಕೆ

ಮೈಸೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ಮಾ.16 ರಂದು ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆಯಿತು.

ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಿ ಅಂತಿಮ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಸಮಿತಿಗೆ ರವಾನಿಸಲಾಯಿತು. ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಅಬ್ದುಲ್ ಹನ್ನಾನ್ ಅವರನ್ನು ಆಯ್ಕೆ ಮಾಡಲಾಯಿತು.

ಚುನಾವಣಾ ವೀಕ್ಷಕರಾಗಿ ಕೋಲಾರ ಕ್ಷೇತ್ರಕ್ಕೆ ಭಾಸ್ಕರ್ ಪ್ರಸಾದ್, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಸೆಂಟ್ರಲ್‌ಗೆ ಮುಜಾಹಿದ್ ಪಾಷಾ, ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಅಬ್ದುಲ್ ಲತೀಫ್, ಬೆಳಗಾವಿ ಕ್ಷೇತ್ರಕ್ಕೆ ಅಫ್ಸರ್, ಬಾಗಲಕೋಟೆ ಕ್ಷೇತ್ರಕ್ಕೆ ರಿಯಾಝ್, ಮೈಸೂರು ಕೊಡಗು ಕ್ಷೇತ್ರಕ್ಕೆ ಅಮ್ಜದ್ ಖಾನ್ ಹಾಗೂ ಚಿತ್ರದುರ್ಗ ಕ್ಷೇತ್ರಕ್ಕೆ ಅಕ್ಬರ್ ಅಲಿಯವರನ್ನು ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಯಿತು.